ಬೆಳ್ತಂಗಡಿ: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ವಸಂತ ಬಂಗೇರ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಡಾ. ಹೆಗ್ಗಡೆಯವರು ವಸಂತ ಬಂಗೇರರನ್ನು ಅಭಿನಂದಿಸಿದರು. ಇವರೊಂದಿಗೆ ಪಡಂಗಡಿ ಸಿ.ಎ. ಬ್ಯಾಂಕಿನ ಅಧ್ಯಕ್ಷ ಯೋಗೀಶ್ ಕುಮಾರ್ ಇದ್ದರು.