News Kannada
Monday, February 06 2023

ಕರಾವಳಿ

ಪಾದಾಚಾರಿಗೆ ಯಮದೂತನಾದ ಓಮ್ನಿ ಕಾರು: ಆರೋಪಿಯ ಬಂಧನ

Photo Credit :

ಪಾದಾಚಾರಿಗೆ ಯಮದೂತನಾದ ಓಮ್ನಿ ಕಾರು: ಆರೋಪಿಯ ಬಂಧನ

ಬಂಟ್ವಾಳ: ಲೊರೆಟ್ಟೊಪದವಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ರೇಮಂಡ್ ಫೆರ್ನಾಂಡೀಸ್ (59) ಎಂಬವರಿಗೆ ಡಿಕ್ಕಿ ಹೊಡೆದು, ಅವರ ಸಾವಿಗೆ ಕಾರಣನಾಗಿ ಪರಾರಿಯಾದ ಮಾರುತಿ ಓಮ್ನಿ ಕಾರು ಮತ್ತು ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.


ಕಳೆದ ಸೋಮವಾರ ಸಂಜೆ ಈ ಘಟನೆ ನಡೆದಿತ್ತು. ಇವರು ಸಂಜೆ ಸುಮಾರು 6.25 ರ ವೇಳೆಗೆ ರಸ್ತೆ ಬದಿಯಲ್ಲಿ ಮನೆಯತ್ತ ನಡೆದುಕೊಂಡು ಹೋಗುತ್ತಿದ್ದ ರೇಮಂಡ್ ಅವರಿಗೆ ಅತೀ ವೇಗ ಹಾಗೂ ಅಜಾಗರುಕತೆಯಿಂದ ಧಾವಿಸಿ ಬಂದ ಬಿಳಿ ಬಣ್ಣದ ಮಾರುತಿ ಒಮ್ನಿ ಕಾರು ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಬೀರ ಗಾಯಗೊಂಡ ಫೆರ್ನಾಂಡೀಸ್ ಅವರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದರಾದರೂ ಅವರು ದಾರಿ ಮಧ್ಯೆ ಕೊನೆಸಿರೆಳೆದಿದ್ದರು. ಘಟನೆ ಬಳಿಕ ಕಾರು ಚಾಲಕ ತನ್ನ ವಾಹನ ನಿಲ್ಲಿಸದೆ ಪರಾರಿಯಾಗಿರುವ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ, ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ಆರೋಪಿ ಕಾರು ಚಾಲಕ ನವೀನ್ ಪೂಜಾರಿ ಎಂಬಾತನನ್ನು ಬಂಟ್ವಾಳ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾದರು. ಆತನನ್ನು ಕೂಲಂಕಷವಾಗಿ ವಿಚಾರಣೆ ನಡೆಸಿದಾಗ ತಪ್ಪು ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಂತೆ ಪ್ರಕರಣದಲ್ಲಿ ಕಲಂ 279, 304(ಎ) ಐಪಿಸಿ ಜೊತೆಗೆ 134(ಎ) ಮತ್ತು (ಬಿ) ಮೋಟಾರು ವಾಹನ ಕಾಯ್ದೆಯನ್ನು ಕಲಂ 304 ಐಪಿಸಿಯನ್ನಾಗಿ ಪರಿವರ್ತಿಸಿ ತನಿಖೆ ಮುಂದುವರಿಸಲು ನ್ಯಾಯಾಲಯಕ್ಕೆ ವರದಿ ನಿವೇದಿಸಲಾಗಿ, ಅನುಮತಿ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

See also  ದಾಖಲೆಯತ್ತ ಮುನ್ನುಗ್ಗುತ್ತಿದೆ ಗೇರು ಬೀಜ ದರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು