ಕಾಸರಗೋಡು: ದಿನಸಿ ಸಾಮಾಗ್ರಿಗಳಲ್ಲಿ ಬಚ್ಚಿಟ್ಟು ವ್ಯಾನ್ ನಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಪಾನ್ ಮಸಾಲ ಉತ್ಪನ್ನಗಳನ್ನು ಬದಿಯಡ್ಕ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ವಿದ್ಯಾಗಿರಿಯ ಅಬ್ದುಲ್ಲ ಕು೦ಞ (35) ಎಂದು ಗುರುತಿಸಲಾಗಿದೆ.
27, 370 ಪಾನ್ ಮಸಾಲ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಕಡೆಯಿಂದ ದಿನಸಿ ಸಾಮಾಗ್ರಿ ಹೇರಿಕೊಂಡು ಬರುತ್ತಿದ್ದ ವ್ಯಾನನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ. 11 ಗೋಣಿ ಚೀಲಗಳಲ್ಲಿ ಪಾನ್ ಮಸಾಲ ಉತ್ಪನ್ನಗಳನ್ನು ದಿನಸಿ ಸಾಮಾಗ್ರಿಗಳಡಿ ಬಚ್ಚಿಟ್ಟು ಸಾಗಿಸಲಾಗುತ್ತಿತ್ತು.ಪುತ್ತೂರು ಕಡೆಯಿಂದ ಬದಿಯಡ್ಕಕ್ಕೆ ತರಲಾಗುತ್ತಿತ್ತು ಎನ್ನಲಾಗಿದೆ. ಬಳಿಕ ಜಿಲ್ಲೆಯ ಹಲವು ಕಡೆಗೆ ಸರಬರಾಜು ಮಾಡಲಾಗುತ್ತಿತ್ತು . ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.