ಕಾಸರಗೋಡು: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಬಳಿ ಆದಿತ್ಯವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಬಂದ್ಯೋಡ್ ಮುಟ್ಟಂನ ಅಬ್ದುಲ್ ರಹ್ಮಾನ್ (55) ಎಂದು ಗುರುತಿಸಲಾಗಿದೆ. ಮೊಮ್ಮಗಳ ವಿವಾಹ ಆಮಂತ್ರಣ ಪತ್ರ ನೀಡಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಂತೆ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡಿಕೊಂಡು ಬಂದ ಕಾರು ಡಿಕ್ಕಿ ಹೊಡೆದಿದ್ದು ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.