ಕಾಸರಗೋಡು: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಪಯಸ್ವಿನಿ ಹೊಳೆಯ ಪೊಯಿನಾಚಿಯಲ್ಲಿ ನಡೆದಿದೆ.
ಮೃತಪಟ್ಟವನನ್ನು ಮಾಯಿಪ್ಪಾಡಿ ಯ ಎ. ಕುಮಾರ್ ರವರ ಪುತ್ರ ಎ.ಕೆ ಆದರ್ಶ್ ( 12) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಯ ಗ್ರಹಪ್ರವೇಶಕ್ಕೆ ಬಂದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಸಂಬಂಧಿಕರಾದ ಮಕ್ಕಳ ಜೊತೆ ಹೊಳೆಗಿಳಿದ ಸಂದರ್ಭದಲ್ಲಿ ನೀರು ಪಾಲಾಗಿದ್ದು, ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಇಂದು ( ಮಂಗಳವಾರ) ಬೆಳಿಗ್ಗೆ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ಈತ ತೆಕ್ಕಿಲ್ ಪರಂಬ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದನು.