ಕಾಸರಗೋಡು: ಅಕ್ರಮ ಮದ್ಯ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಮಧೂರು ಕೊಲ್ಯದ ಜಯ ( 35) ಎಂದು ಗುರುತಿಸಲಾಗಿದೆ. ಈತನಿಂದ 60 ಪ್ಯಾಕೆಟ್ ವಿದೇಶಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಮದ್ಯ ತಂದು ಮಾರಾಟ ಮಾಡಲೆಂದು ತರಲಾಗಿತ್ತು ಎನ್ನಲಾಗಿದೆ. ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಅಬಕಾರಿ ದಳ ಮತ್ತು ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು , ಇದರಂತೆ ಅಕ್ರಮ ಮದ್ಯ ವಶಪಡಿಸಿಕೊಂಡು ಓರ್ವನನ್ನು ಬಂಧಿಸಲಾಗಿದೆ.