ಬೆಳ್ತಂಗಡಿ: ವಿದೇಶದಲ್ಲಿ ಕೆಲಸಕ್ಕಿದ್ದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ಘಟನೆ ಗೇರುಕಟ್ಟೆ ಕೊರೆಂಜ ಶಾಲೆಯ ಸನಿಹ ಭಾನುವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಪೆರ್ನೆ ಬಿಳಿಯೂರು ಬಾನೊಟ್ಟು ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಸರಫುದ್ಧೀನ್ (26) ಎಂದು ಗುರುತಿಸಲಾಗಿದೆ. ಇವರು ಬೈಕ್ ನಲ್ಲಿ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಜೀಪು ಡಿಕ್ಕಿ ಹೊಡೆದಿದೆ.
ಅಫಘಾತದ ಪರಿಣಾಮ ತೀವ್ರವಾಗಿ ಗಾಯಗೊಂಡ ಇವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಯಲ್ಲಿ ಅಸುನೀಗಿದ್ದಾರೆ. ಸರಫುದ್ಧೀನ್ ಎರಡು ದಿನಗಳ ಹಿಂದೆಯಷ್ಟೇ ವಿದೇಶದಿಂದ ಹಿಂತಿರುಗಿದ್ದರು ಎನ್ನಲಾಗಿದೆ. ಬೆಳ್ತಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.