News Kannada
Tuesday, November 29 2022

ಕರಾವಳಿ

ಶಿಕ್ಷಕಿ ಬೈದರೆಂಬ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ - 1 min read

Photo Credit :

ಶಿಕ್ಷಕಿ ಬೈದರೆಂಬ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಕಾಸರಗೋಡು: ಶಿಕ್ಷಕಿ ಬೈದರೆಂಬ ಕಾರಣಕ್ಕೆ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆಗೆತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಪರವಡ್ಕದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಘಟನೆ ಬಳಿಕ ರೊಚ್ಚಿಗೆದ್ದ ವಿದ್ಯಾರ್ಥಿಗಳ ಗುಂಪೊಂದು ಶಾಲೆಯಲ್ಲಿ ದಾಂದಲೆ ನಡೆಸಿದ್ದು, ಈ ಸಂದರ್ಭದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಶಾಲಾ ಕಟ್ಟಡ ಗಾಜುಗಳು ಹುಡಿಯಾಗಿದ್ದು, ಪೀಠೋಪಕರಣಗಳನ್ನು ಹಾನಿಗೊಳಿಸಲಾಗಿದೆ. ಪರವನಡ್ಕದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ಎಂಟನೇ ತರಗತಿ ವಿದ್ಯಾರ್ಥಿ ಆಲ್ ಹಾದ್ (14) ಎಂಬಾತನನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಿಂದ ಓಡಿದ ವಿದ್ಯಾರ್ಥಿ ಸಮೀಪವಿದ್ದ ಬಾವಿಗೆ ಹಾರಿದ್ದು ಇದನ್ನು ಗಮನಿಸಿದ ವಿದ್ಯಾರ್ಥಿಗಳು ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರು.

ತರಗತಿಗೆ ಪುಸ್ತಕ ತರಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೋರ್ವರು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ. ತರಗತಿಯಿಂದ ಹೊರಬಂದ ವಿದ್ಯಾರ್ಥಿ ಅಲ್ಲಿ ಶಿಕ್ಷಕರೋರ್ವರ ಜೊತೆ ವಾಗ್ವಾದ ನಡೆಸಿದ್ದನೆನ್ನಲಾಗಿದೆ. ಬಳಿಕ ಅಲ್ಲಿಂದ ಓಡಿ ಶಾಲಾ ಆವರಣದ ಬಾವಿಗೆ ಹಾರಿದ್ದಾಗಿ ಸಹಪಾಠಿಗಳು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರು. ಬಾವಿಯಲ್ಲಿ ನೀರು ಕಡಿಮೆ ಇತ್ತು. ಇದರಿಂದ ಆಪಾಯ ತಪ್ಪಿದೆ ಎನ್ನಬಹುದು. ವಿದ್ಯಾರ್ಥಿಯ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ನಡುವೆ ಎ.ಬಿ.ವಿ.ಪಿ ಶುಕ್ರವಾರ ಸಂಜೆ ಶಾಲೆಗೆ ಪ್ರತಿಭಟನಾ ಜಾಥಾ ನಡೆಸಿತು. ತಪ್ಪಿತಸ್ಥರ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ.

ಶಾಲೆಗ ಕಾಸರಗೋಡು ನಗರ ಠಾಣಾ ಸಬ್ ಇನ್ಸ್ ಪೆಕ್ಟರ್ ಅಜಿತ್ ಕುಮಾರ್ ನೇತೃತ್ವ ಪೊಲೀಸ್ ತಂಡ ಬಂದೋ ಬಸ್ತ್ ಏರ್ಪಡಿಸಿದೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆ ನಡೆಸುತ್ತಿದ್ದಾರೆ.

See also  ವಿದ್ಯುತ್ ಕಂಬ ಅಳವಡಿಕೆ ಮಾಡುತ್ತಿದ್ದ ವೇಳೆ ವಿದ್ಯುತ್ ಅವಘಡ: ಇಬ್ಬರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು