ಕಾಸರಗೋಡು: ಬೈಕ್ – ಸ್ಕೂಟರ್ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಆದಿತ್ಯವಾರ ರಾತ್ರಿ ಕುಂಬಳೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕುಂಬಳೆಯ ಸುರೇಶ್ (41) ಎಂದು ಗುರುತಿಸಲಾಗಿದೆ. ಮಾಯಿಪ್ಪಾಡಿಯ ಅಮು , ಸುಮಲತಾ ಎಂಬವರು ಗಾಯಗೊಂಡಿದ್ದಾರೆ. ಬದಿಯಡ್ಕ- ಕುಂಬಳೆ ರಸ್ತೆಯ ಜಿಲ್ಲಾ ಸಹಕಾರಿ ಆಸ್ಪತ್ರೆ ಮುಂಭಾಗದಲ್ಲಿ ಅಪಘಾತ ನಡೆದಿದೆ.
ಗಂಭೀರ ಗಾಯಗೊಂಡ ಸುರೇಶ್ ರವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಇತರ ಇಬ್ಬರನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.