ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐದು ದಿನ ನಡೆಯುವ `ಜಾಲತಾಣಗಳಲ್ಲಿ ಆ್ಯಪ್ ಅಭಿವೃದ್ಧಿ ಪಡಿಸುವಿಕೆ ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನೆ ಮಹತ್ವ ಬಗ್ಗೆ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಬೆಂಗಳೂರು ವಿಶ್ವವಿದ್ಯಾಲಯದ ಸರ್.ಎಂವಿ ಇಸ್ರೊ ಚೆರ್ ಪ್ರೊಪೆಸರ್ ಡಾ. ಬಾಲಕೃಷ್ಣನ್ ಮಾಣಿಕ್ಯಮ್ ಉದ್ಘಾಟಿಸಿ, ಆಧುನಿಕ ಯುಗದಲ್ಲಿ ಕಂಪ್ಯೂಟರ್ ಬಳಕೆಯ ಮಹತ್ವವನ್ನು ಮೇಕ್ ಇನ್ ಇಂಡಿಯಾ ಯೋಜನೆಯ ಜೊತೆಗೆ ಹೋಲಿಸಿ ಅದರ ಪ್ರಸ್ತುತೆಯ ಬಗ್ಗೆ ವಿವರಿಸಿದರು.
ರಾಜ್ಯದ ಸುಮಾರು 50 ಮಂದಿ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ ಎಂದು ಕಂಪ್ಯೂಟರ್ ಸೈನ್ಸ್ ಆಂಡ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಕೊಠಾರಿ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಡಾ.ಮೊಹಿದ್ದೀನ್ ಬಾದುಶಾ, ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಜಯಂತ್ ರಾಥೋಡ್ ಉಪಸ್ಥಿತರಿದ್ದರು. ರೆಮುಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.