ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಎನ್.ಎಸ್.ಎಸ್. ಘಟಕದ ಸ್ವಯಂ ಸೇವಕಿ ಗೀತಾಂಜಲಿ ಹಿರೇಮಠ್ ರಾಜ್ಯಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಆಯ್ಕೆಗೊಂಡಿದ್ದಾಳೆ ಎಂದು ಮೈಸೂರು ಉಪವಿಭಾಗದ ಸಹಾಯಕ ಸಂಯೋಜನಾಧಿಕಾರಿ ಸಿ.ಆರ್ ದಿನೇಶ್ ಮಾಹಿತಿ ನೀಡಿದ್ದಾರೆ.
ಗೀತಾಂಜಲಿ ಹಿರೇಮಠ್ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.