ಬೆಳ್ತಂಗಡಿ: ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಜನವರಿ 27, 28, 29 ರಂದು “ಸ್ವಚ್ಛ ಭಾಷೆ-ಸ್ಚಚ್ಛ ಜೀವನ-ಸ್ವಚ್ಛ ಸಮಾಜ” ಎಂಬ ಆಶಯದೊಂದಿಗೆ, ಡಾ. ಕೆ. ಚಿನ್ನಪ್ಪ ಗೌಡರ ಸರ್ವಾಧ್ಯಕ್ಷತೆಯಲ್ಲಿ ಜರಗಲಿರುವ 21ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು.
ಈ ಸಂದರ್ಭ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ, ಕಾರ್ಯದರ್ಶಿ ಡಾ.ಎಂ. ದಯಾಕರ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಗೌರವ ಕಾರ್ಯದರ್ಶಿ ಡಾ.ಎಂ.ಪಿ ಶ್ರೀನಾಥ್ ಮತ್ತು ಪೊಳಲಿ ನಿತ್ಯಾನಂದ ಕಾರಂತ ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕ ವಸಂತ ಬಂಗೇರ ಅವರ ನೇತೃತ್ವದಲ್ಲಿ, ಡಾ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ವಿವಿಧ ಸಮಿತಿಗಳ ದುಡಿಮೆಯೊಂದಿಗೆ ಸಮ್ಮೇಳನದ ಪೂರ್ವಸಿದ್ದತೆ ಭರದಿಂದ ನಡೆಯುತ್ತಿದೆ.