ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ವಾಮಂಜೂರು ಚೆಕ್ ಪೋಸ್ಟ್ ಸಮೀಪ ಆದಿತ್ಯವಾರ ತಡರಾತ್ರಿ ನಡೆದಿದೆ.
ಮೃತಪಟ್ಟವರನ್ನು ಸಂಶುದ್ದೀನ್ (೨೮) ಎಂದು ಗುರುತಿಸಲಾಗಿದೆ. ಉಪ್ಪಳ ಕುಕ್ಕಾರ್ ನ ಮುಹಮ್ಮದ್ ಅಮೀರ್ (೩೦) ಮತ್ತು ಅಬ್ದುಲ್ ಲತೀಫ್ (೨೯) ಗಾಯಗೊಂಡಿದ್ದಾರೆ .
ಸಂಶುದ್ದೀನ್ ಸ್ಥಳದಲ್ಲೇ ಮೃತಪಟ್ಟರೆ. ಇಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಮಂಜೇಶ್ವರ ಚೆಕ್ ಪೋಸ್ಟ್ ನ ಸಮೀಪ ಉಪ್ಪಳ ಸೇತುವೆ ಬಳಿ ಈ ಅಪಘಾತ ನಡೆದಿದೆ. ಅಪಘಾತದಿಂದ ಮಾರುತಿ ಆಲ್ಟೋ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಕಾರನ್ನು ಮೇಲೆಕ್ಕೆತ್ತಿರುವ ಪೊಲೀಸರು ಠಾಣೆಗೆ ಕೊಡೊಯ್ದಿದ್ದಾರೆ.
ಗಾಯಾಳುಗಳನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮಂಗಲ್ಪಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ .
ಅಪಘಾತಕ್ಕೀಡಾದ ಕಾರಿನಲ್ಲಿ ಬಂದೂಕು ಪತ್ತೆಯಾಗಿದೆ. ಪೊಲೀಸರು ತಪಾಸಣೆ ನಡೆಸಿದಾಗ ಬಂದೂಕು ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ