ಮೂಡಬಿದಿರೆ: ಪ್ರಕೃತಿ ಸಮೂಹ ಸಂಸ್ಥೆ 68ನೇ ಗಣರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿ, ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಪ್ರೊ. ಬಿ ಪದ್ಮನಾಭ ಗೌಡ ಅವರು ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ಒಳ್ಳೆಯ ಆಚಾರ-ವಿಚಾರ, ನಡೆ-ನುಡಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎನ್ನುವ ಮೂಲಕ ಹಿತನುಡಿಗಳನ್ನಾಡಿದರು. ವಿದ್ಯಾರ್ಥಿನಿಯಾದ ಕು. ತೃಪ್ತಿ ಗಣರಾಜ್ಯೋತ್ಸವದ ಮಹತ್ವದ ಕುರಿತು ತನ್ನ ಅಭಿಪ್ರಾಯಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಯಾದ ಆಕಾಶ್ ಜವಳಿ, ಪ್ರಾಂಶುಪಾಲರಾದ ರಾಘವೇಂದ್ರ ಶೆಣೈ, ಉಪಪ್ರಾಂಶುಪಾಲರಾದ ವೀಣಾ ಶೇಡಿಕಜೆ ಉಪಸ್ಥಿತರಿದ್ದರು. ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು, ಶಿಕ್ಷಕಿ ರಕ್ಷಾ ವಂದನಾರ್ಪಣೆ ಮಾಡಿದರು. ಶಿಕ್ಷಕಿ ಸಮೀಹಾ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.