ಹಾಸನ: ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ನಡೆದ ಹಿಮಪಾತದಲ್ಲಿ ಜಿಲ್ಲೆಯ ಶಾಂತಿ ಗ್ರಾಮ ಹೋಬಳಿ ದೇವಿಹಳ್ಳಿ ಗ್ರಾಮದ ಯೋಧ ಸಂದೀಪ್ ಕುಮಾರ್ ಹುತಾತ್ಮರಾಗಿದ್ದು ಹುಟ್ಟೂರು ಶೋಕ ಸಾಗರದಲ್ಲಿ ಮುಳುಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಹುಟ್ಟೂರಿನಲ್ಲಿ ಹೆತ್ತವರು ಸೇರಿದಂತೆ ಬಂಧುಬಳಗ, ಗ್ರಾಮಸ್ಥ್ತರು ದುಃಖದ ಮಡುವಿನಲ್ಲಿ ಮುಳುಗಿದ್ದಾರೆ. ವೀರ ಮರಣವನ್ನಪ್ಪಿರುವ ಯೋಧನಿಗೆ ಜಿಲ್ಲಾ ಉಸ್ತುವಾರಿ, ರೇಷ್ಮೆ ಮತ್ತು ಪಶು ಸಂಗೋಪನಾ ಸಚಿವರಾದ ಎ. ಮಂಜು ಅವರು ಕಂಬನಿ ಮಿಡಿದಿದ್ದಾರೆ. ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಇದೊಂದು ಅತ್ಯಂತ ದುಃಖದ ಸಂಗತಿ ದೇಶದ ಜನರ ಜೀವ ರಕ್ಷಣೆಗಾಗಿ ಭಾರತೀಯ ಸೇನೆಯಲ್ಲಿ ಹಗಲಿರುಳು ದುಡಿದು, ಪ್ರಕೃತಿ ಆಕಸ್ಮಿಕದಲ್ಲಿ ಹುತಾತ್ಮರಾದ ಸಂದೀಪ್ ಕುಮಾರ್ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದ್ದಾರೆ .
ಜಿಲ್ಲೆಯ ಯೋಧ ಸಂದೀಪ್ ಕುಮಾರ್ ಅವರು ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ಹಿಮಪಾತಕ್ಕೆ ಬಲಿಯಾಗಿರುವುದು ಅತ್ಯಂತ ಶೋಕದ ವಿಚಾರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಈ ದುಃಖವನ್ನು ಭರಿಸುವ ಶಕ್ತಿ ಅವರ ತಂದೆ ತಾಯಿ ಮತ್ತು ಕುಟುಂಬಕ್ಕೆ ಭಗವಂತ ನೀಡಲಿ ಎಂದು ಶಾಸಕರಾದ ಹೆಚ್. ಎಸ್. ಪ್ರಕಾಶ್ ಸಂತಾಪ ವ್ಯಕ್ತಪಡಿಸಿದ್ದಾರೆ.