News Kannada
Wednesday, September 28 2022

ಕರಾವಳಿ

ಕೇಂದ್ರ ಸರ್ಕಾರದ ವಿರುದ್ಧ ಎಸ್ಡಿಪಿಐ ವತಿಯಿಂದ ಪ್ರತಿಭಟನೆ - 1 min read

Photo Credit :

 ಕೇಂದ್ರ ಸರ್ಕಾರದ ವಿರುದ್ಧ ಎಸ್ಡಿಪಿಐ ವತಿಯಿಂದ ಪ್ರತಿಭಟನೆ

ಸುಳ್ಯ: ನೋಟು ರದ್ದತಿ ಮತ್ತಿತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್ಡಿಪಿಐ) ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ಸುಳ್ಯದಲ್ಲಿ ಪ್ರತಿಭಟನಾ ರ್ಯಾಲಿ ಮತ್ತು ಕರಿ ದಿನಾಚರಣೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಕಾರ್ಪೋರೇಟ್ ಸಂಸ್ಥೆಗಳ ಹಿತವನ್ನು ಕಾಪಾಡಲು ಮತ್ತು ಶ್ರೀಮಂತರಿಗೆ ಲಾಭ ಮಾಡಿ ಕೊಡುವ ಉದ್ದೇಶದಿಂದ ನರೇಂದ್ರ ಮೋದಿ ಸರ್ಕಾರ ನೋಟು ರದ್ದತಿ, ಡಿಜಿಟಲ್ ಹಣಕಾಸು ವ್ಯವಸ್ಥೆಯಂತಹಾ ಕಾರ್ಯಗಳನ್ನು ಮಾಡುತಿದೆ. ಇದರಿಂದ ಜನ ಸಾಮಾನ್ಯರು ಬೀದಿಗೆ ಬಿಳುವ ಪರಿಸ್ಥಿತಿ ಉಂಟಾಗಿದೆ. ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಜನ ಸಾಮಾನ್ಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುತಿದೆ ಎಂದು ಹೇಳಿದರು. ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿರುವ ಕೇಂದ್ರ ಸರ್ಕಾರದ ನೀತಿಯಿಂದಾಗಿ ಜನರ ಬದುಕು ದುಸ್ತರವಾಗಿದೆ ಎಂದು ಅವರು ಹೇಳಿದರು.
 
ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ಖಾನ್ ಕೋಡಾಜೆ,  ಸುಳ್ಯ ವಿಧಾನಸಭಾಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ರಾಜ್ಯ ಸಮಿತಿ ಸದಸ್ಯ ಕೂಸಪ್ಪ, ಪಿಎಫ್ಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ, ಸುಳ್ಯ ನಗರ ಪಂಚಾಯಿತಿ ಸದಸ್ಯ ಕೆ.ಎಸ್.ಉಮ್ಮರ್, ಎಸ್ಡಿಪಿಐ ಸುಳ್ಯ ನಗರಾಧ್ಯಕ್ಷ ಅಬ್ದುಲ್ ಕಲಾಂ, ಕಾರ್ಯದರ್ಶಿ ಸಂಶುದ್ದೀನ್, ಜಿಲ್ಲಾ ಸಮಿತಿ ಕೋಶಾಧಿಕಾರಿ ಇಕ್ಬಾಲ್ ಐಎಂಆರ್,  ಜಾಬೀರ್ ಅರಿಯಡ್ಕ, ಸಿದ್ದೀಕ್ ಪುತ್ತೂರು, ರಿಜ್ವಾನ್ ಪುತ್ತೂರು, ಮಮ್ಮಾಲಿ ಹಾಜಿ ಬೆಳ್ಳಾರೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಭಟನಾ ಸಭೆಗೆ ಮುನ್ನ ನಗರದಲ್ಲಿ ರ್ಯಾಲಿ ನಡೆಯಿತು. ಜ್ಯೋತಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ ಗಾಂಧೀನಗರದವರೆಗೆ ತೆರಳಿ ಖಾಸಗೀ ಬಸ್ ನಿಲ್ದಾಣದಲ್ಲಿ ಸಮಾಪನಗೊಂಡಿತು.

See also  ಭಾರತೀಯರು ಶಕ್ತಿಯ ಆರಾಧಕರು, ಅದು ನಮ್ಮ ಧರ್ಮ: ಸಚಿವ ಅನಂತಕುಮಾರ್ ಹೆಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು