ಮೂಡುಬಿದಿರೆ: ನಗರ ಎಸ್ಬಿಐ ಎಟಿಎಂ ಹಾಗೂ ಪುತ್ತಿಗೆ ಸಂಪಿಗೆ ಮನೆಯೊಂದರ ಹಟ್ಟಿ ಮಂಗಳವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.
ಮೂಡುಬಿದಿರೆ ಪೇಟೆಯಲ್ಲಿ ಮುಖ್ಯರಸ್ತೆಯ ಪಕ್ಕದಲ್ಲೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರಡು ಎಟಿಎಂ ಯಂತ್ರಗಳು ಹಾಗೂ ಎಸಿ ಹಾನಿಗೀಡಾಗಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಬೆಂಕಿಯನ್ನು ನಂದಿಸಿರುವುದರಿಂದ ಭಾರಿ ಪ್ರಮಾಣದ ದುರಂತ ಸಂಭವಿಸುವುದು ತಪ್ಪಿದಂತಾಗಿದೆ.
ಬೆಂಕಿ ಆಕಸ್ಮಿಕದಿಂದಾಗಿ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಕಡದಲ್ಲಿರುವ ಮೋನಪ್ಪ ಪೂಜಾರಿ ಎಂಬವರ ಮನೆಯ ಹಟ್ಟಿ ಭಸ್ಮವಾಗಿದೆ. ಹಟ್ಟಿಯಲ್ಲಿದ್ದ ದನಗಳನ್ನು ರಕ್ಷಿಸುವಲ್ಲಿ ಮನೆಯವರು ಸ್ಥಳೀಯರ ನೆರವಿನಿಂದ ಸಫಲರಾಗಿದ್ದಾರೆ.