News Kannada
Tuesday, February 07 2023

ಕರಾವಳಿ

ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಮಹಾಸ್ವಾಮೀಜಿ

Photo Credit :

ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಮಹಾಸ್ವಾಮೀಜಿ

ಮಡಿಕೇರಿ: ಕ್ರೀಡೆಗೆ ವಯಸ್ಸಿನ ಮಿತಿಯಿಲ್ಲ. ದೇಹ ಸ್ಥಿತಿ ಉತ್ತಮವಾಗಿರಲು ಕ್ರೀಡೆ ಪ್ರಮುಖವಾಗಿದೆ. ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಾಗಿರಲು ಕ್ರೀಡೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತಿಹಾಸದ ಪುಟ ತಿರುಗಿ ನೋಡಿದರೆ ಗ್ರೀಸ್, ರೋಮ್ ಮುಂತಾದ ದೇಶಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕ್ರೀಡೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನಮ್ಮ ದೇಶದಲ್ಲೂ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ ಪೊಲೀಸರು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಸ್ವಾಗತಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಪೊಲೀಸರು ದಿನದ 24 ಗಂಟೆ ಕೆಲಸ ಮಾಡುತ್ತಾರೆ. ಈ ಒತ್ತಡದಿಂದ ಹೊರಬರಲು ಕ್ರೀಡೆಯು ಸಹಕಾರಿಯಾಗಿದೆ. ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಿದ್ದರಿರಲು ಕ್ರೀಡೆ ಸಹಕಾರಿಯಾಗಿದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಫೆ.11 ರವರೆಗೆ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ ಎಂದರು.
 
2015ರ ಸಾಲಿನ ವೈಯಕ್ತಿಕ ಚಾಂಪಿಯನ್ ಆದ ಪೊಲೀಸ್ ಸಿಬ್ಬಂದಿ ಗಿರೀಶ್ ಎಂ.ಎನ್. ರವರು ಕ್ರೀಡಾ ಜ್ಯೋತಿಯನ್ನು ಮುನ್ನಡೆಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ನಿವೃತ್ತ ಪೊಲೀಸ್ ಅಧಿಕಾರಿಗಳು ಇತರರು ಇದ್ದರು. ಎಂ.ಎಸ್.ಲೋಕೇಶ್ ನಿರೂಪಿಸಿದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಸಂಪತ್ ಕುಮಾರ್ ವಂದಿಸಿದರು.

See also  ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು