ಕಾಸರಗೋಡು: ಕೆಎಸ್ಆರ್ ಟಿಸಿ ಬಸ್ಸು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಯುವಕ ಮೃತಪಟ್ಟ ಘಟನೆ ತಲಪಾಡಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಜೇಶ್ವರ ಮಲ್ಲಗುರಿಯ ಮಹೇಶ್ (34) ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ನಿರ್ವಹಿಸುತ್ತಿದ್ದ ಮಹೇಶ್ ಬುಧವಾರ ರಾತ್ರಿ ತಲಪಾಡಿ ಮೇಲಿನ ಬಸ್ಸು ನಿಲ್ದಾಣ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್ಸು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.