News Kannada
Monday, February 06 2023

ಕರಾವಳಿ

ದೇವರ ಮೀನುಗಳನ್ನು ‘ಕೂಲ್’ ಮಾಡಲು ಚಿಮ್ಮುತಿದೆ ಕಾರಂಜಿ

Photo Credit :

ದೇವರ ಮೀನುಗಳನ್ನು 'ಕೂಲ್' ಮಾಡಲು ಚಿಮ್ಮುತಿದೆ ಕಾರಂಜಿ

ಸುಳ್ಯ: ಪ್ರಕೃತಿಯ ಬಲು ಅಪರೂಪದ ಕೊಡುಗೆ ಸುಳ್ಯ ತಾಲೂಕಿನ ತೊಡಿಕಾನದ ಪುರಾಣ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಮತ್ಸ್ಯ ತೀರ್ಥ ನದಿಯಲ್ಲಿರುವ ಮಹಶೀರ್ ಮೀನುಗಳು. ಆದರೆ ಪ್ರತಿ ವರ್ಷ ಬೇಸಿಗೆ ಬಂದರೆ ಮೀನುಗಳಿಗೂ ಜಲಕ್ಷಾಮದ ಭೀತಿಯನ್ನು ತಂದೊಡ್ಡುತ್ತದೆ. ಪ್ರತಿ ವರ್ಷ ಬೇಸಿಗೆಯಲ್ಲಿ ಉಂಟಾಗುವ ನೀರಿನ ಅಭಾವದಿಂದಾಗಿ ಈ ಮೀನುಗಳನ್ನು ಸಂರಕ್ಷಿಸುವುದೇ ಒಂದು ಸವಾಲಾಗುತ್ತಿದೆ.

ಈ ಬಾರಿ ಸಾಕಷ್ಟು ಬೇಗನೇ ಎಚ್ಚೆತ್ತು ಕೊಂಡಿರುವ ದೇವಸ್ಥಾನದ ಆಡಳಿತ ಮಂಡಳಿ ಇವುಗಳಿಗೆ ಶುದ್ಧ ನೀರನ್ನು ಪೂರೈಸುವ ಕಾರ್ಯವನ್ನು ಈಗಾಗಲೇ ಆರಂಭಿಸಿದೆ. ಮಹಶೀರ್ ಮೀನುಗಳು ವಾಸಿಸುವ ಅಣೆಕಟ್ಟಿಗೆ ಪೈಪ್ ಗಳ ಮೂಲಕ ನೀರನ್ನು ತಂದು ಅವುಗಳನ್ನು ಕಾರಂಜಿಯಂತೆ ಚಿಮ್ಮಿಸಿ ಅಣೆಕಟ್ಟಿನ ನೀರು ಬಿಸಿ ಆಗದಂತೆ ಎಚ್ಚರ ವಹಿಸಲಾಗುತ್ತದೆ. ಕಳೆದ ಎರಡು ತಿಂಗಳಿನಿಂದ ಈ ರೀತಿ ನದಿಯ ಮೇಲೆ ನೀರನ್ನು ಕಾರಂಜಿಯಂತೆ ಚಿಮ್ಮಿಸಲಾಗುತ್ತದೆ.   

ಹಿಂದೆಲ್ಲ ಕಡು ಬೇಸಿಗೆ ಬಂದರೆ ನೀರಿನ ಕೊರತೆಯಿಂದ ಈ ಮೀನುಗಳು ವಿಲವಿಲನೆ ಒದ್ದಾಡುವ ಪರಿಸ್ಥಿತಿ ಉಂಟಾಗಿತ್ತು. ದೇವಸ್ಥಾನದ ಪಕ್ಕದಲ್ಲಿರುವ ಅಣೆಕಟ್ಟಿನಲ್ಲಿ ಶೇಖರಣೆಯಾದ ನೀರಿನಲ್ಲಿ ಮೀನುಗಳು ಓಡಾಡುತ್ತವೆ. ಬೇಸಿಗೆಯಲ್ಲಿ ಎಲ್ಲೆಡೆ ನದಿ, ಹಳ್ಳ, ಕೊಳ್ಳಗಳು ಬತ್ತುತ್ತಿರುವಂತೆಯೇ ಮತ್ಸ್ಯ ತೀರ್ಥ ಹೊಳೆಯಲ್ಲಿಯೂ ನೀರಿನ ಹರಿವು ಕಡಿಮೆಯಾಗುವುದು ಮೀನುಗಳಿಗೆ ಕಂಠಕಪ್ರಾಯವಾಗಿ ಪರಿಣಮಿಸುತ್ತದೆ. ಈ ಮೀನುಗಳಿಗೆ ಬದುಕಲು ತಂಪಾದ ಶುದ್ಧ ಹರಿಯುವ ನೀರು ಬೇಕಾಗಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಲ್ಲಿ ಮೀನುಗಳಿಗೆ ನೀರಿನ ಕೊರತೆ ಎದುರಾಗುತ್ತದೆ.

ಆದರೆ ಈ ವರ್ಷ ಎಲ್ಲೆಡೆ ನೀರಿನ ಅಭಾವ ಸಾಕಷ್ಟು ಬೇಗನೇ ಕಂಡು ಬಂದಿರುವುದರಿಂದ ಮತ್ಸ್ಯ ತೀರ್ಥ ನದಿಯ ನೀರು ಕೂಡ ಕಡಿಮೆಯಾಗದಂತೆ ಮೇಲಿರುವ ದೊಡ್ಡ ಅಣೆಕಟ್ಟಿನ ಕೆಳಗೆ ಮತ್ತೊಂದು ಅಣೆಕಟ್ಟನ್ನು ನಿರ್ಮಿಸಿ ನೀರನ್ನು ಶೇಖರಿಸಲಾಗುತ್ತದೆ. ಅಲ್ಲದೆ ದೂರದ ದೇವರಗುಂಡಿ ಜಲಪಾತದಿಂದ ಪೈಪ್ ಮೂಲಕ ನೀರನ್ನು ತಂದು ಡ್ಯಾಂಗೆ ಹರಿಸಲಾಗುತ್ತದೆ. ಅಲ್ಲದೆ ಟ್ಯಾಂಕಿನ ನೀರನ್ನು ಕೂಡ ಹರಿಸಿ ಮೀನುಗಳ ಮೇಲೆ ಹಾಯಿಸಿ ಮೀನುಗಳು ಇರುವ ನೀರನ್ನು ಕೂಲ್ ಮಾಡಲಾಗುತ್ತಿದೆ. ಜನರು ಅತ್ಯಂತ ಪೂಜ್ಯ ಭಾವದಿಂದ ಕಾಣುವ ಮತ್ತು ಪ್ರಕೃತಿಯ ಅಪರೂಪದ ಸಂಪತ್ತಾದ ಈ ಮಹಶೀರ್ ಮೀನುಗಳನ್ನು ಸಂರಕ್ಷಿಸಲು ದೇವಸ್ಥಾನದ ವತಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕಳೆದ ವರ್ಷ ಕಡು ಬೇಸಿಗೆ ಎದುರಾದಾಗಲೂ ಇದೇ ರೀತಿ ದೇವರಗುಂಡಿಯ ನೀರನ್ನು ಪೈಪ್ ಗಳ ಮೂಲಕ ಹಾಯಿಸಿ ಮೀನುಗಳನ್ನು ಸಂರಕ್ಷಿಸಲಾಗಿತ್ತು.

ಬೇಸಿಗೆ ಕಾಲದಲ್ಲಿ ನೀರಿನ ಕೊರತೆಯಿಂದ ದೇವರ ಮೀನುಗಳ ಜೀವಕ್ಕೆ ಕುತ್ತು ಬಂದ ಹಲವು ನಿದರ್ಶನಗಳಿವೆ. 1999 ಮತ್ತು 2003ರಲ್ಲಿ ಭೀಕರ ಬರಗಾಲ ಅಪ್ಪಳಿಸಿ ನೀರಿನ ಕೊರತೆ ಉಂಟಾಗಿ ಮೀನನ ಸಂತತಿಗೆ ತೀವ್ರ ತೊಂದರೆ ಎದುರಾಗಿತ್ತು. ವಿಶಿಷ್ಟ ಪ್ರಭೇದದ ಈ ಮೀನು ಒಮ್ಮೆ ನಾಶವಾದರೆ ಮತ್ತೆ ಅವುಗಳು ವೃದ್ಧಿಯಾಗುವುದು ಬಲು ಕಷ್ಟ. ಈ ಮೀನುಗಳಿಗೆ ಬದುಕಲು ಕಲುಷಿತಗೊಳ್ಳದ ಹರಿಯುವ ನೀರು ಅತೀ ಅಗತ್ಯ. ಮತ್ಸ್ಯತೀರ್ಥದ ನೀರಿನ ಹರಿವು ಕಡಿಮೆಯಾದಾಗಲೆಲ್ಲ ದೇವರಗುಂಡಿ ಜಲಪಾತದಿಂದ ಪೈಪ್ ಹಾಕಿ ನೀರನ್ನು ಮತ್ಸ್ಯ ತೀರ್ಥಕ್ಕೆ ಹರಿಸಲಾಗುತ್ತದೆ.

See also  ಸ್ಯಾನಿಟರಿ ನ್ಯಾಪ್ಕಿನ್ ನಲ್ಲಿದ್ದ 53 ಲಕ್ಷ ರೂಪಾಯಿ ಚಿನ್ನ ವಶ

ಮತ್ಸ್ಯತೀರ್ಥದ ಸಂರಕ್ಷಣೆಗೆ ಸರ್ಕಾರ ಹಲವು ಯೋಜನೆಗಳನ್ನು ಘೋಷಿಸಿದ್ದರೂ, ಬೇಸಿಗೆಯಲ್ಲಿ ಮೀನುಗಳಿಗೆ ಜಲಕ್ಷಾಮ ಎದುರಾಗುವುದನ್ನು ತಡೆಯುವುದು ದೊಡ್ಡ ಸವಾಲಾಗಿದೆ. ಇದೀಗ ಪೈಪ್ ಹಾಕಿ ನೀರನ್ನು ಟ್ಯಾಂಕ್ ಗೆ ತುಂಬಿಸಿ ಅಲ್ಲಿಂದ ಅಗತ್ಯ ಸಂದರ್ಭದಲ್ಲಿ ಮತ್ಸ್ಯತೀರ್ಥಕ್ಕೆ ಬಿಡುವ ಯೋಜನೆಯನ್ನು ರೂಪಿಸಲಾಗಿದೆ. ಮೀನುಗಾರಿಕಾ ಇಲಾಖೆಯು ಈ ಮತ್ಸ್ಯತೀರ್ಥವನ್ನು `ಮತ್ಸ್ಯಧಾಮ’ವೆಂದು ಘೋಷಣೆ ಮಾಡಿದೆ.
ಪ್ರತಿ ವರ್ಷವೂ ಬೇಸಿಗೆಯಲ್ಲಿ ದೇವರ ಮೀನುಗಳಿಗೆ ಜಲಕ್ಷಾಮ ಎದುರಾಗುತ್ತದೆ. ಆದುದರಿಂದ ದೇವರ ಮೀನುಗಳಿಗೆ ಎದುರಾಗುವ ನೀರಿನ ಅಭಾವವನ್ನು ನೀಗಿಸಲು ದೇವಸ್ಥಾನದ ವತಿಯಿಂದ ದೇವರಗುಂಡಿ ಜಲಪಾತದಿಂದ ಪೈಪ್ ಮೂಲಕ ನೀರನ್ನು ತಂದು ಕಿಂಡಿ ಅಣೆಕಟ್ಟಿಗೆ ಹಾಯಿಸಿ ಮೀನುಗಳಿಗೆ ತಂಪು ವಾತಾವರಣವನ್ನು ಸೃಷ್ಠಿಸಲಾಗುತ್ತದೆ. ಈ ಮೀನುಗಳಿಗೆ ಶುದ್ಧವಾದ ನೀರು ಬೇಕು. ಮೀನುಗಳು ವಾಸಿಸುವ ನೀರು ಬಿಸಿ ಆಗದಂತೆ ಮತ್ತು ಕಲುಷಿತಗೊಳ್ಳದಂತೆ ಎಚ್ಚರ ವಹಿಸಲಾಗುತ್ತಿದೆ ಎನ್ನುತ್ತಾರೆ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಯು.ಎಂ.ಕಿಶೋರ್ಕುಮಾರ್.

`ದೇವರ ಮೀನುಗಳು’
ತೊಡಿಕಾನದ ಮಲ್ಲಿಕಾರ್ಜುನ ಕ್ಷೇತ್ರದ ಸಮೀಪದಲ್ಲಿಯೇ ಹರಿಯುವ ಮತ್ಸ್ಯತೀರ್ಥ ನದಿ ಮತ್ತು ಮತ್ಸ್ಯಸಂಕುಲವನ್ನು ಜನರು ಬಲು ಪೂಜನೀಯ ಭಾವದಿಂದ ಕಾಣುತ್ತಾರೆ. ಶಿವಲಿಂಗವನ್ನು ಕಣ್ವ ಮಹರ್ಷಿಗಳು ತೊಡಿಕಾನ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸುವ ಸಂದರ್ಭದಲ್ಲಿ ಶಿವನು ಮಹಾವಿಷ್ಣುವನ್ನು ಮತ್ಸ್ಯವಾಹನವನ್ನಾಗಿಸಿ ಅಂತರ್ಮಾರ್ಗದಲ್ಲಿ ಧಾವಿಸಿ ಬಂದನು ಎಂಬ ಪ್ರತೀತಿ ಇದೆ. ಹೀಗೆ ಮೀನಾಗಿ ಬಂದ ಮಹಾವಿಷ್ಣು ದೇವಸ್ಥಾನದ ಬಳಿಯ ನದಿಯಲ್ಲಿ ನೆಲೆಸುತ್ತಾನೆ ಎಂಬುದು ನಂಬಿಕೆ. ಆದುದರಿಂದಲೇ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅರ್ಚನೆಯಾದ ನೈವೇದ್ಯವನ್ನು ಮೀನುಗಳಿಗೆ ಅರ್ಪಿಸಲಾಗುತ್ತದೆ. ಭಕ್ತರು ಮೀನುಗಳಿಗೆ ಅಕ್ಕಿ ಹಾಗೂ ಇತರ ಆಹಾರ ಪದಾರ್ಥಗಳನ್ನು ಹಾಕಿ ಕೃತಾರ್ಥರಾಗುತ್ತಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು