ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಮಂಗಳೂರು ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರು ಅಭಿನಯಿಸುವ ಡಾ.ಚಂದ್ರಶೇಖರ ಕಂಬಾರ ವಿರಚಿತ ಜಾನಪದ ನಾಟಕ ಮಹಾಮಾಯಿ ಮಾ.6ರಂದು ಸಾಯಾಂಕಾಲ 6.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.
ಜೀವನ್ರಾಂ ಸುಳ್ಯ ಅವರ ನಿರ್ದೇಶನ ಹೊಂದಿರುವ ನಾಟಕದ 98ನೇ ಪ್ರದರ್ಶನ ಇದಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಪ್ರದರ್ಶನಕ್ಕೆ ಚಾಲನೆ ನೀಡುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ, ಕರ್ನಾಟಕ ಬ್ಯಾಂಕ್ ಲಿ. ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯ ಪ್ರಬಂಧಕ ಶ್ರೀನಿವಾಸ ದೇಶಪಾಂಡೆ ಅತಿಥಿಗಳಾಗಿರುವರು.
ಸಮಯಕ್ಕೆ ಸರಿಯಾಗಿ ಪ್ರದರ್ಶನಗೊಳ್ಳುವ ನಾಟಕ ಪ್ರದರ್ಶನಕ್ಕೆ ಉಚಿತ ಪ್ರವೇಶವಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಳ್ವಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.