ಕಾಸರಗೋಡು: ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಕಸ್ಟಮ್ಸ್ ಅಧಿಕಾರಿಯೊಬ್ಬರು ಗಾಯಗೊಂಡ ಘಟನೆ ಆದಿತ್ಯವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಕಾಸರಗೋಡು ಆಲಂಪಾಡಿ ಅಬ್ದುಲ್ ರಜಾಕ್ (34) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಕಸ್ಟಮ್ಸ್ ಅಧಿಕಾರಿ ವಿಪಿನ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಜಿಕೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಜೇಶ್ವರದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ.
ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ತಲಪಿಸಿದರೂ ರಜಾಕ್ ಮೃತಪಟ್ಟರು. ಸೌದಿಯಲ್ಲಿ ಉದ್ಯೋಗದಲ್ಲಿದ್ದ ರಜಾಕ್ ಕೆಲ ತಿಂಗಳ ಹಿಂದೆ ನಡೆದ ಸಹೋದರ ಅಜೀಜ್ ನ್ ವಿವಾಹಕ್ಕೆ೦ದು ಊರಿಗೆ ಬಂದಿದ್ದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.