ಮೂಡುಬಿದಿರೆ: ಮುಖ್ಯಮಂತ್ರಿಗಳ ಗ್ರಾಮವಿಕಾಸ ಯೋಜನೆಗೆ ಆಯ್ಕೆಯಾಗಿರುವ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಕೆ. ಅಭಯಚಂದ್ರ ಜೈನ್ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆಯನ್ನು ನೀಡಿದರು.
ನಂತರ ಮಾತನಾಡಿದ ಅವರು ‘ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವಿಕಾಸ ಯೋಜನೆಯ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳನ್ನು 75 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ರಸ್ತೆ, ಸಮುದಾಯ ಭವನ, ಜಿಮ್ ನ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.
ನೆಲ್ಲಿಕಾರು ಗ್ರಾ.ಪಂ. ಅಧ್ಯಕ್ಷ ಜಯಂತ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಜಿ.ಪಂ ಸದಸ್ಯೆ ಸುನೀತಾ, ತಾ.ಪಂ ಸದಸ್ಯೆ ರೇಖಾ ಸಾಲ್ಯಾನ್, ಸಂಪತ್ ಸಾಮ್ರಾಜ್ಯ, ತಾ.ಪಂ. ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ಶಿವಾನಂದ ಎಸ್. ಪಾಂಡ್ರು, ಮೂಡಾ ಮಾಜಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ಧನಂಜಯ ಆಳ್ವ, ಗ್ರಾ.ಪಂ ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ, ಮಾಜಿ ಉಪಾಧ್ಯಕ್ಷ ಶಶಿಧರ್ ಪಂಚಾಯತ್ ಸದಸ್ಯರು, ಪಿಡಿಓ ಪ್ರಶಾಂತ್, ಪಂಚಾಯತ್ ಸಿಬಂದಿ ಪ್ರಶಾಂತ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.