News Kannada
Monday, February 06 2023

ಕರಾವಳಿ

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಪ್ರತಿಭಟನೆ

Photo Credit :

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ರೈತ ವಿರೋಧಿಯಾಗಿರುವ ರಾಜ್ಯ ಸರಕಾರದ ಪ್ರತಿಯೊಂದು ಹೆಜ್ಜೆಯಲ್ಲೂ ಎಡವಿದೆ. ತುಂಬೆ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಕೊಡಲು ಮೀನ ಮೇಷ ಎಣಿಸುತ್ತಿರುವ ಬೆನ್ನಲ್ಲೇ, ಅಣೆಕಟ್ಟು ಎತ್ತರಿಸಿದ ಬಳಿಕ ನದಿ ತೀರದ ಜನರು ಹಾಗೂ ಬಂಟ್ವಾಳದ ಜನರಿಗೆ ರೋಗಭಾಗ್ಯ ಒದಗಿಸುತ್ತಿದೆ ಎಂದು ಪ್ರಗತಿಪರ ಕೃಷಿಕ, ಬಿಜೆಪಿ ನಾಯಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಲೇವಡಿ ಮಾಡಿದರು.

ರೈತರ ಸಾಲ ಮನ್ನಾ, ಕುಡಿಯಲು ನೀರು, ಉದ್ಯೋಗ ಭರವಸೆ ಒದಗಿಸಲು ಒತ್ತಾಯಿಸಿ, ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಮೇಲ್ಸೇತುವೆ ಬಳಿ ಶುಕ್ರವಾರ ಬೆಳಗ್ಗೆ  ನಡೆದ ಪ್ರತಿಭಟನಾ ಸಭೆ ಯನ್ನುದ್ದೇಶಿಸಿ ಅವರು ಮಾತನಾಡಿದರು. ರೈತರ ಸಂಕಷ್ಟಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಈಗಾಗಲೇ ನೇತ್ರಾವತಿ ನದಿ ಮಲಿನಗೊಂಡಿದ್ದು, ಇದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಬಂದಿಲ್ಲವೇ, ಪರಿಸರ ಮಂತ್ರಿಗಳೂ ಆಗಿರುವ ರಮಾನಾಥ ರೈಗಳು, ಬಂಟ್ವಾಳದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಅನುಷ್ಠಾನಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಉಮಾನಾಥ ಕೋಟ್ಯಾನ್ ಮಾತನಾಡಿ, ರಾಜ್ಯದಾದ್ಯಂತ ಬರಗಾಲ ತಾಂಡವವಾಡುತ್ತಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯ ಸರಕಾರ ಇದ್ಯಾವುದರ ಪರಿವೆಯೇ ಇಲ್ಲದಂತೆ ವರ್ತಿಸುತ್ತಿದೆ. ಎತ್ತಿನಹೊಳೆ ಯೋಜನೆ, ಸ್ಟೀಲ್ ಬ್ರಿಡ್ಜ್ ವಿಚಾರದಲ್ಲಿ ಹಣಕಾಸಿನ ವ್ಯವಹಾರ ಸಂಶಯಾಸ್ಪದವಾಗಿದ್ದು, ಅಂಥ ವಿಚಾರಗಳಲ್ಲೇ ರಾಜ್ಯ ಸರಕಾರ ಮುಳುಗಿದೆ. ರೈತರ ಕುರಿತು ಅಧಿಕಾರಿಗಳು ವರ್ತಿಸುವ ರೀತಿ ಸರಿ ಇಲ್ಲ. ಕೂಡಲೇ ಎಲ್ಲರಿಗೂ ನೀರಿನ ವ್ಯವಸ್ಥೆ ಮಾಡಿ ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮಾತನಾಡಿ, ಒಂದೂವರೆ ವರ್ಷಗಳಿಂದ ಬಡವರಿಗೆ ಬಿಪಿಎಲ್ ಕಾರ್ಡ್ ಒದಗಿಸುತ್ತಿಲ್ಲ. ಹಾಲಿನ ಸಬ್ಸಿಡಿ ಇನ್ನೂ ಫಲಾನುಭವಿಗಳಿಗೆ ದೊರಕಿಲ್ಲ ,ಬಿಜೆಪಿ ಸರಕಾರ ಇದ್ದಾಗ ಎರಡು ಬಾರಿ ಸಾಲ ಮನ್ನಾ ಮಾಡಿತ್ತು. ಈಗ ಜನರು ಶಾಪ ಇಡಲು ಆರಂಭಿಸಿದ್ದಾರೆ. ಈ ಅನಿಷ್ಠ ಸರಕಾರ ತೊಲಗಬೇಕು ಎಂದು ಹೇಳಿದರು. ಸಭೆಯನ್ನು ಉದ್ದೇಶಿಸಿ ಮಾಜಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಜೀವ ಭಂಡಾರಿ ಮಾತನಾಡಿದರು.

ಬೇಡಿಕೆ:
ಕೂಡಲೇ ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ಸಮರೋಪಾದಿಯಲ್ಲಿ ಯೋಜನೆ ರೂಪಿಸಬೇಕು. ರೈತರ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿ, ಬರ ಪರಿಹಾರ ಕಾರ್ಯಕ್ಕೆ ಚಾಲನೆ ನೀಡಬೇಕು. ಜಾನುವಾರುಗಳಿಗೆ ಮೇವು ಒದಗಿಸಲು ಕೂಡಲೇ ಜಿಲ್ಲಾಧಿಕಾರಿಗೆ ಆದೇಶ ನೀಡುವುದರ ಜೊತೆಗೆ ಹಣ ಬಿಡುಗಡೆ ಮಾಡಬೇಕು. ಗೋಶಾಲೆಗಳನ್ನು ರಾಜ್ಯಾದ್ಯಂತ ತೆರೆದು ಸಂಕಷ್ಟದಲ್ಲಿರುವ ರೈತರ ಜಾನುವಾರುಗಳಗೆ ಆಶ್ರಯ ಒದಗಿಸಬೇಕು. ಗುಳೇ ಹೋಗುವ ಅನಿವಾರ್ಯತೆ ಎದುರಿಸುತ್ತಿರುವ ರೈತಾಪಿ ಕುಟುಂಬ ಮತ್ತು ಕೂಲಿ ಕಾರ್ಮಿಕರಿಗೆ ಉದ್ಯೋಗ ಭರವಸೆ ಯೋಜನೆಯಡಿ ಸೂಕ್ತ ಉದ್ಯೋಗ ನೀಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮಂಡಿಸಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

See also  ಸಂಸ್ಕಾರ, ಸಂಸ್ಕೃತಿ ಆಧಾರಿತ ಅರ್ಥಪೂರ್ಣ ಜೀವನವೇ ಶ್ರೇಷ್ಠ: ವೀರೇಂದ್ರ ಹೆಗ್ಗಡೆ

ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಮಂಡಲ ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಂಡಲ ಉಪಾಧ್ಯಕ್ಷರಾದ ವಿಜಯ ರೈ, ದೇವಪ್ಪ ಪೂಜಾರಿ, ಹರಿಶ್ಚಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಯಶವಂತ ಪೂಜಾರಿ, ಗಣೇಶ್ ಸುವರ್ಣ, ಕುಲ್ಯಾರ್ ನಾರಾಯಣ ಶೆಟ್ಟಿ, ದಿನೇಶ್ ಭಂಡಾರಿ, ಎ.ಗೋವಿಂದ ಪ್ರಭು, ವಜ್ರನಾಥ ಕಲ್ಲಡ್ಕ, ಸಂತೋಷ್ ಕುಮಾರ್, ತನಿಯಪ್ಪ ಗೌಡ, ಪುರುಷೋತ್ತಮ ಶೆಟ್ಟಿ, ಜಯಂತಿ ವೀರಕಂಭ, ಗಂಗಾಧರ ಕೋಟ್ಯಾನ್, ವಸಂತ ಅಣ್ಣಳಿಕೆ, ರಮನಾಥ ರಾಯಿ, ಸೀತಾರಾಮ ಪೂಜಾರಿ, ರತ್ನಕುಮಾರ್ ಚೌಟ, ಆನಂದ ಕುಲಾಲ್, ಸಂಜೀವ ಪೂಜಾರಿ, ದಿನೇಶ್ ಅಮ್ಟೂರು, ಚೆನ್ನಪ್ಪ ಕೋಟ್ಯಾನ್, ಬಿ.ಕೆ.ಅಣ್ಣು ಪೂಜಾರಿ, ಮೋಹನ್ ಪಿ.ಎಸ್, ಮಹಾಬಲ ಶೆಟ್ಟಿ, ಮಚ್ಚೇಂದ್ರ ಸಾಲಿಯಾನ್, ರೋನಾಲ್ಡ್ ಡಿ ಸೋಜ, ಗುರುದತ್ ನಾಯಕ್, ಗೋಪಾಲ ಸುವರ್ಣ ,ಪುಷ್ಪರಾಜ್ ಚೌಟ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು