ಮೂಡಬಿದಿರೆ: ಆಳ್ವಾಸ್ ದ್ವಿತೀಯ ಎಂ.ಸಿ.ಜೆ ವಿದ್ಯಾರ್ಥಿನಿ ಶ್ರೀಗೌರಿ ಎಸ್ ಜೋಶಿ ಯುವ ಚೇತನಾ ಪ್ರಶಸ್ತಿ-2017 ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಬೆಂಗಳೂರು ಮೂಲದ ಯೂತ್ ಫಾರ್ ಸೇವಾ ಎನ್.ಜಿ.ಓ ಸಂಘಟನೆ ಬದಲಾವಣೆಯ ಸೈನಿಕರು ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಿತ್ತು. ಧನಾತ್ಮಕ ಪತ್ರಿಕೋದ್ಯಮ, ಪರಿಣಾಮಕಾರಿ ಬರಹ, ಕ್ರಿಯಾತ್ಮಕ ಬರಹ ವಿಭಾಗದಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ, ಧನಾತ್ಮಕ ಪತ್ರಿಕೋದ್ಯಮ ವಿಭಾಗದಿಂದ ಇವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮೊದಲ ಹಂತದ ದೂರವಾಣಿ ಸಂದರ್ಶನದ ನಂತರ ಮುಖಾಮುಖಿ ಸಂದರ್ಶನ ಹಾಗೂ ಸ್ಕೈಪ್ ಸಂದರ್ಶನದ ಸಾಮಾಥ್ರ್ಯದ ಆಧಾರದ ಮೇಲೆ ಅಭ್ಯರ್ಥಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಫ್ರಶಸ್ತಿಗೆ ದಕ್ಷಿಣ ಭಾರತದಿಂದ 30 ವಿದ್ಯಾರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಲಾಗಿದ್ದು, ಕೊನೆಯ ಹಂತದ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾರ್ಚ್ 26ರಂದು ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ವಿಭಾಗದ ಮುಖ್ಯಸ್ಥೆ ಡಾ ಮೌಲ್ಯ ಜೀವನ್ರಾಮ್ ವಿದ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸಿದ್ದಾರೆ.