ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತನೋರ್ವನ ಮೃತದೇಹ ಮನೆ ಸಮೀಪದ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.
ಕೋಡೋ ಬೇಳೂರು ಮಂಡಾಳ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆ. ಆರ್ ಸಜಿ(30) ಮೃತಪಟ್ಟವರು.
ಆದಿತ್ಯವಾರ ಸಂಜೆ ಮನೆಯಿಂದ ಹೊರ ತೆರಳಿದ್ದ ಇವರು ಬಳಿಕ ನಾಪತ್ತೆಯಾಗಿದ್ದರು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಈ ನಡುವೆ ಶೋಧ ನಡೆಸಿದಾಗ ಮನೆ ಸಮೀಪದ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.