News Kannada
Saturday, October 01 2022

ಕರಾವಳಿ

PFI ಕಾರ್ಯಕರ್ತರಿಂದ ಪೋಲೀಸ್ ಆಯುಕ್ತರ ಕಛೇರಿಗೆ ಮುತ್ತಿಗೆ: ಲಾಠಿ ಚಾರ್ಜ್‌, ಹಲವರಿಗೆ ಗಾಯ - 1 min read

Photo Credit :

PFI ಕಾರ್ಯಕರ್ತರಿಂದ ಪೋಲೀಸ್ ಆಯುಕ್ತರ ಕಛೇರಿಗೆ ಮುತ್ತಿಗೆ: ಲಾಠಿ ಚಾರ್ಜ್‌, ಹಲವರಿಗೆ ಗಾಯ

ಮಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆ(PFI)ಯ ಕಾರ್ಯಕರ್ತರು ಇಂದು ಪೊಲೀಸ್‌ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೋಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ನಡೆಸಿದರು.

ಈ ವೇಳೆ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಹಿಂದೂ ಸಂಘಟನೆಯ ನಾಯಕರ ಹತ್ಯೆಗೆ ಸಂಬಂಧಿಸಿ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆದಿದೆ.

ಘೋಷಣೆಗಳನ್ನು ಕೂಗುತ್ತಾ ನೂರಾರು ಕಾರ್ಯಕರ್ತರು  ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಸಂದರ್ಭ ಸ್ಥಳದಲ್ಲಿದ್ದ ಪೋಲೀಸರು ಕಾರ್ಯಕರ್ತರ ಮೇಲೆ ಲಾಠಿ ಬೀಸಿದ್ದಾರೆ.

ಓರ್ವ ಪಿಎಫ್ಐ ಕಾರ್ಯಕರ್ತನ ತಲೆಗೆ ಗಂಭೀರ ಗಾಯವಾಗಿ ತೀವ್ರ ಸ್ವರೂಪದಲ್ಲಿ ರಕ್ತಸ್ರಾವವಾಗಿದ್ದು, ಲಾಠಿ ಏಟಿನಿಂದ ಹಲವರು ಮಂದಿ ಗಾಯಗೊಂಡಿದ್ದು, ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಮುತ್ತಿಗೆ ಹಾಕಲು ಯತ್ನಿಸಿದ 60 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, 7 ಮಂದಿ ಪೋಲಿಸ್ ಸಿಬ್ಬಂದಿಯೂ ಗಾಯಗೊಂಡಿರುವುದಾಗಿ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.

See also  ಪಾಣಾಜೆ: ಮಿಕ್ಸಿ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು