ಕಾಸರಗೋಡು: ಮನೆ ಹಿತ್ತಿಲಿನ ಬಾವಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಗರ ಹೊರವಲಯದ ಹಳೆ ಸೂರ್ಲು ಎಂಬಲ್ಲಿ ನಡೆದಿದೆ.
ಮೃತಪಟ್ಟವನನ್ನು ಅಬ್ದುಲ್ ರಹಮಾನ್ (೨೩) ಎಂದು ಗುರುತಿಸಲಾಗಿದೆ.
ನಡೆದುಕೊಂಡು ಹೋಗುತ್ತಿದ್ದಾಗ ಆವರಣವಿಲ್ಲದ ಬಾವಿಗೆ ಬಿದ್ದು ಈ ಘಟನೆ ನಡೆದಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದು, ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.