ಉಳ್ಳಾಲ: ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಮಾಸ್ತಿಕಟ್ಟೆ ಎಂಬಲ್ಲಿ ಸಂಭವಿಸಿದೆ.
ಸಂತೋಷ್ ನಗರದ ಬಾಡಿಗೆ ಮನೆಯ ನಿವಾಸಿ ನಾಗರಾಜ್ ಎಂಬವರ ಪುತ್ರ ಸುನಿಲ್ (25) ಮೃತ ಯುವಕ. ಸೋಮವಾರ ಸಂಜೆ ವೇಳೆ ಉಳ್ಳಾಲದ ಸುಂದರಿಭಾಗ್ ನಿಂದ ಕೆಲಸ ಮುಗಿಸಿ ಮನೆ ಕಡೆಗೆ ವಾಪಾಸಾಗುತ್ತಿದ್ದ ಸಂದರ್ಭ ಮಂಗಳೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಸಿಟಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಮೀಪದ ಹೊಂಡಕ್ಕೆ ಬೈಕ್ ಉರುಳಿ ಬಿದ್ದಿದ್ದು ಸುನಿಲ್ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ವೃತ್ತಿಯನ್ನು ನಡೆಸುತ್ತಿದ್ದರು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.