ಕಾರ್ಕಳ: ತಾಲೂಕು ವ್ಯಾಪ್ತಿಯಲ್ಲಿ ಕಪ್ಪು, ಕೆಂಪು ಕಲ್ಲುಗಳ, ಮರಳು ಹಾಗೂ ಟಿಂಬರ್ ಗಳ ಅಕ್ರಮ ದಂಧೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು ಇದರಿಂದ ಪ್ರಾಕೃತಿಕ ಸಂಪತ್ತು ಲೂಟಿಯಾಗಿ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟವಾಗುತ್ತಿರುವ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿರುವ ನಡುವೆ ಬೋಳ ಬರಬೈಲು ಶಾಂಭವಿ ನದಿಯಲ್ಲಿ ಕಳೆದ ಹಲವು ದಿನಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರುಳುಗಾರಿಕೆ. ಶಾಂಭವಿ ನದಿಯಲ್ಲಿನ ಮರಳು ತೆಗೆದು ಬರಬೈಲು ಎಂಬಲ್ಲಿ ಕಾರ್ಕಳ ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿಸಿದ್ದಾರೆ.
2 ಕಡೆಯಲ್ಲಿ ಸುಮಾರು 40 ಕ್ಕೂ ಹೆಚ್ಚು ಲೋಡು ಮರಳು ಸಂಗ್ರಹಿಸಲಾಗಿತ್ತು. ಅದರ ಅಂದಾಜು ಮೌಲ್ಯ 4 ಲಕ್ಷ ಎಂದು ತಿಳಿದುಬಂದಿದೆ. ಪತ್ತೆಯಾದ ಸೊತ್ತನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಪ್ರಕರಣದ ಆರೋಪಿ ಪಕ್ಷದ ಮುಖಂಡ?!:
ಮರಳು ದಂಧೆಯಲ್ಲಿ ತೊಡಗಿರುವ ವ್ಯಕ್ತಿ ರಾಷ್ಟ್ರೀಯ ಪಕ್ಷವೊಂದರ ಮುಖಂಡನಾಗಿದ್ದು, ನಿಕಟಪೂರ್ವ ಜನಪ್ರತಿ ಎಂಬುವುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ. ಆರೋಪಿಗಳ ಹೆಸರನ್ನು ಹೇಳಲಿಚ್ಚಿಸದ ಅಧಿಕಾರಿಗಳು ಅಕ್ರಮ ಮರಳು ಸಂಗ್ರಹಿಸಿಟ್ಟ ಜಾಗದ ವಾರಸುದಾರರು, ಕೂಡಿಟ್ಟವರು ಯಾರೆಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಆ ಕುರಿತು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನೀಡಿ ವರದಿ ಬಂದ ಬಳಿಕ ನೈಜ ಆರೋಪ ಪತ್ತೆಯಾಗಲಿದೆ ಎಂದು ತಹಶೀಲ್ದಾರ್ ಟಿ.ಜಿ ಗುರುಪ್ರಸಾದ್ ಪತ್ರಿಕೆಗೆ ತಿಳಿಸಿದ್ದಾರೆ.