ಬೆಳ್ತಂಗಡಿ: ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಯನ್ನು ಧರ್ಮಸ್ಥಳ ಪೋಲಿಸರು ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಬಂಧಿತ ಆರೋಪಿಯನ್ನು ಬೆಳಾಲು ಕುಂಡಡ್ಕ ಸುರುಳಿ ನಿವಾಸಿ ಸುಂದರ (23) ಎಂಬವನಾಗಿದ್ದಾನೆ. ಈತ ನಿಡ್ಲೆ ಸಮೀಪ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದು ಕಳೆದ ಮೂರು ತಿಂಗಳ ಹಿಂದೆ ತನ್ನ ಸಂಬಂಧಿಕರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ 17 ವರ್ಷದ ಬಾಲಕಿಯನ್ನು ಪುಸಾಲಾಯಿಸಿ ಅತ್ಯಾಚಾರ ಗೈದಿದ್ದ.
ಕಳೆದರೆಡು ದಿನಗಳಿಂದ ಹೊಟ್ಟೆನೋವು ಎಂದು ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು ಇದರಿಂದ ಪ್ರಕರಣ ಬಯಲಿಗೆ ಬಂದಿದೆ. ಮಕ್ಕಳ ಕಲ್ಯಾಣ ಸಮಿತಿಯವರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಧರ್ಮಸ್ಥಳ ಪೋಲಿಸ್ ಠಾಣೆಗೆ ದೂರು ನೀಡಿದ್ದು ಇದರಂತೆ ಕಾರ್ಯಪ್ರವೃತರಾದ ಧರ್ಮಸ್ಥಳ ಪೋಲಿಸರು ಆರೋಪಿಯನ್ನು ಶುಕ್ರವಾರ ರಾತ್ರಿ ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಾಹಿತಿ ಬಹಿರಂಗ ಪಡಿಸದಂತೆ ಕೊಲೆ ಬೆದರಿಕೆಯನ್ನು ಒಡ್ಡಿದ್ದ.