ಕಾಸರಗೋಡು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಜ್ಯ ಹೆದ್ದಾರಿಯ ಉದುಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಇಡುಕ್ಕಿ ಕಟ್ಟಪ್ಪನದ ಕೆ.ಕೆ ಗೋಪಾಲ(70)ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಗೋಪಾಲರನ್ನು ಮಂಗಳೂರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ.
ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.