ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಬಂಟ್ವಾಳ ತಾಲೂಕು ಆತ್ಮಯೋಜನೆ 2017-18 ಯಾಂತ್ರೀಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರವನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಯವರು ಪಂಜಿಕಲ್ಲುವಿನಲ್ಲಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಭತ್ತ ಕೃಷಿ ಯಾಂತ್ರೀಕರಣದಿಂದ ಲಾಭ ಗಳಿಸಬಹುದು ಎಂದರು. ರೈತರು ಯಾಂತ್ರೀಕೃತ ಭತ್ತ ನಾಟಿ ಮಾಡಿದರೆ ಒಂದು ಹೆಕ್ಟೇರಿಗೆ ರೂ.1600 ಸರಕಾರ ಸಹಾಯಧನ ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಎಪಿಎಮ್ಸಿ ಅಧ್ಯಕ್ಷ ಪದ್ಮನಾಭ ರೈ, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಕರ್ನಾಟಕ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಎಚ್. ಕೆಂಪೇಗೌಡ, ಮಂಗಳೂರು ಉಪವಿಭಾಗ ಉಪಕೃಷಿ ನಿರ್ದೇಶಕ ಮುನೇಗೌಡ, ಬಾಲೇಶ್ವರ ಬ್ರಹ್ಮಬೈದರ್ಕಳ ಸಮಿತಿಯ ಅಧ್ಯಕ್ಷ, ಕಾರ್ಯಧ್ಯಕ್ಷ, ಪ್ರಮುಖರಾದ ಪ್ರಕಾಶ್ ಕುಮಾರ್ ಜೈನ್, ಕೃಷ್ಣರಾಜ ಜೈನ್, ಶೇಖರ್, ರವಿ ಮತ್ತಿತ್ತರರು ಉಪಸ್ಥಿತರಿದ್ದರು.
ಸಹಾಯಕ ಕೃಷಿ ನಿರ್ದೇಶಕ ಪಿ.ಎಫ್. ಮಿರಾಂದ ಸ್ವಾಗತಿಸಿ, ಬಂಟ್ವಾಳ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.