ಮಂಗಳೂರು: ಪಕ್ಷದ ಸಂಘಟನೆ ಬಲವರ್ಧನೆ ಮಾಡುವ ದೃಷ್ಠಿಯಲ್ಲಿ ರಾಜ್ಯದ ಕೆಲವೆಡೆ ಸಮಾವೇಶಗಳು ನಡೆಯುತ್ತಿವೆ. ಪ್ರತೀ ಕ್ಷೇತ್ರದಲ್ಲೂ ಕಾರ್ಯಾಗಾರ ಮಾಡುವ ಮೂಲಕ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ಜಾಗೃತಗೊಳಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ.ಜಿಲ್ಲೆ ಹಾಗೂ ಕೊಡಗು ಜಿಲ್ಲೆ ಸೇರಿ ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಹಾಗೂ ದುರ್ಬಲರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಜುಲೈ 7ರಂದು ಅಡ್ಯಾರ್ ಗಾಡ್ ನಲ್ಲಿ ದೊಡ್ಡಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾಮಾಜಿಕ ಕಾಳಜಿಯುತ ಕಾರ್ಯಕ್ರಮಗಳನ್ನು ನಡೆಸಿ ಜಿಲ್ಲೆಯ ಹಲವಾರು ಸಮಸ್ಯೆಗಳ ಅಹವಾಲುಗಳನ್ನು ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಪಕ್ಷ ಪಾಲ್ಗೊಂಡು ಎಲ್ಲಾಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲು ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮಾಜಿ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ನೂತನ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಜೆ.ಆರ್ ಲೋಬೊ, ಮೊಯ್ದೀನ್ ಬಾವ, ಮತ್ತಿತರರು ಉಪಸ್ಥಿತರಿದ್ದರು.
ಪಕ್ಷದ ಸಂಘಟನೆ ಬಲಗೊಳಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ: ರೈ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.