News Kannada
Wednesday, November 30 2022

ಕರಾವಳಿ

ದಿ| ಶರತ್ ನಿವಾಸಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ - 1 min read

Photo Credit :

ದಿ| ಶರತ್ ನಿವಾಸಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ

ಬಂಟ್ವಾಳ:ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಹತ್ಯೆಗೊಳಗಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಹೆತ್ತವರಿಗೆ ಸಾಂತ್ವನ ಹೇಳಿದರು.

ಸಜ್ಜನ, ಅಮಾಯಕ ಅರ್ ಎಸ್ ಎಸ್ ಕಾರ್ಯಕರ್ತ ಶರತ್ ಕೊಲೆ ಖಂಡನೀಯ, ಆಡಳಿತ ಸೂತ್ರ ಹಿಡಿದವರಿಂದ ಜಿಲ್ಲೆಯಲ್ಲಿ ನಡೆಯವ ಅಹಿತಕರ ಘಟನೆ ನಡೆಯುತ್ತಿದೆ ಎಂದು ಸಚಿವ ಡಿ ವಿ ಸದಾನಂದ ಗೌಡ ಅವರು ಆರೋಪಿಸಿದ್ದಾರೆ.

ಮನೆಗೆ ಆಧಾರಸ್ತಂಭವಾಗಿದ್ದ ಮಗನನ್ನು ಕಳೆದು ಕೊಂಡು ದು:ಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೆನೆ. ಒಬ್ಬ ಶರತ್ ಕೊಲೆ ಅಗಿದ್ದರೂ ಅಂತಹ ನೂರಾರು ಶರತ್ ಹುಟ್ಟಿ ಬಂದು ದುಷ್ಕರ್ಮಿಗಳಿಗೆ ಪಾಠ ಕಲಿಸಲಿದ್ದಾರೆ. ಮಧ್ಯಾಹ್ನ ಜಿಲಾಧಿಕಾರಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಎಲ್ಲ ಮಾಹಿತಿ ಪಡೆಯುತ್ತೇನೆ ಎಂದ ಸಚಿವ ಡಿವಿಎಸ್ ಜಿಲ್ಲೆಯಲ್ಲಿ ನಡೆಯುವ ಅಹಿತಕರ ಘಟನೆಗೆ ಯಾರು ತುಪ್ಪ ಸುರಿಯುತ್ತಿದ್ದಾರೆಂಬುದನ್ನು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ತಿಳಿಸುವುದಾಗಿ ಗುಡುಗಿದರು.

ಈ ಸಂದರ್ಭ ಕಾರ್ಕಳ ಶಾಸಕ ಸುನೀಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಎಂ ಎಲ್ ಸಿ.ಗಣೇಶ್ ಕಾರ್ಣಿಕ್, ಮಾಜಿ ಶಾಸಕರಾದ ಯೋಗೀಶ್ ಭಟ್, ರುಕ್ಮಯ ಪೂಜಾರಿ, ಮೋನಪ್ಪ ಭಂಡಾರಿ, ಮುಖಂಡರಾದ ರಾಜೇಶ್ ನಾಯ್ಕ್, ದೇವದಾಸ ಶೆಟ್ಟಿ, ಜಿ.ಆನಂದ, ಆಶೋಕ ರೈ ಕೋಡಿಂಬಾಡಿ ಉದಯಕುಮಾರ್ ಶೆಟ್ಟಿ ಉಡುಪಿ, ಗೋವಿಂದ ಪ್ರಭು, ದಿನೇಶ ಭಂಡಾರಿ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಅಬ್ದುಲ್ ರಜಾಕ್, ಕ್ರಷ್ಣಪ್ಪ ಪೂಜಾರಿ ಕಲ್ಲಡ್ಕ, ರಂಜನ್ ಗೌಡ ಮೊದಲಾದವರಿದ್ದರು.

See also  ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ: ಅದೃಷ್ಟವಶಾತ್ ಇಬ್ಬರು ಪಾರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು