News Kannada
Friday, December 02 2022

ಕರಾವಳಿ

ಕೊಲೆಗೈಯ್ಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕರ್ನಾಟಕ ಮೂಲದ ಕೂಲಿ ಕಾರ್ಮಿಕ

Photo Credit :

ಕೊಲೆಗೈಯ್ಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕರ್ನಾಟಕ ಮೂಲದ ಕೂಲಿ ಕಾರ್ಮಿಕ

ಕಾಸರಗೋಡು: ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಕೊಲೆಗೈಯ್ಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಚೆರ್ಕಳದಲ್ಲಿ ನಡೆದಿದೆ.

ಕೊಲೆಗೀಡಾದವರನ್ನು ಬಾಗಲಕೋಟೆಯ ರಂಗಪ್ಪ (35) ಎಂದು ಗುರುತಿಸಲಾಗಿದೆ. ಚೆರ್ಕಳ ಸಮೀಪದ ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಕೊಲೆ ನಡಿದಿರಬಹುದು ಎಂದು ಶಂಕಿಸಲಾಗಿದೆ.

ಮೃತದೇಹದ ಬಳಿ ಗುರುತು ಚೀಟಿ, ಪಾಕೆಟ್ ಡೈರಿ ಮೊದಲಾದವು ಪತ್ತೆಯಾಗಿದೆ. ರಂಗಪ್ಪ ಮತ್ತು ಇತರ ನಾಲ್ವರು ಚೆರ್ಕಳದ ವಸತಿಗ್ರಹದಲ್ಲಿ ವಾಸ್ತವ್ಯ ಹೂಡುತ್ತಿದ್ದು, ಪೊಲೀಸರು ತಪಾಸಣೆ ನಡೆಸಿದಾಗ ಕೊಠಡಿಗೆ ಬೀಗ ಜಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ರಂಗಪ್ಪನ ಜೊತೆಗಿದ್ದ ನಾಲ್ವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

See also  ಬಂಟ್ವಾಳದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು