News Kannada
Sunday, September 25 2022

ಕರಾವಳಿ

ಅಕ್ರಮ ಕಟ್ಟಡ ಬಗ್ಗೆ ಮಹಾನಗರ ಪಾಲಿಕೆ ಮೌನ: ತುಳುನಾಡ ರಕ್ಷಣಾ ವೇದಿಕೆ ಆರೋಪ - 1 min read

Photo Credit :

ಅಕ್ರಮ ಕಟ್ಟಡ ಬಗ್ಗೆ ಮಹಾನಗರ ಪಾಲಿಕೆ ಮೌನ: ತುಳುನಾಡ ರಕ್ಷಣಾ ವೇದಿಕೆ ಆರೋಪ

ಮಂಗಳೂರು: ನಗರದಲ್ಲಿ ಅಕ್ರಮ ಹಾಗೂ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಟ್ಟುತ್ತಿರುವಂತಹ ಕಟ್ಟಡದ ವಿರುದ್ಧ ತುಳುನಾಡ ರಕ್ಷಣಾ ವೇದಿಕೆ ಮುಂದಿನ ದಿನಗಳಲ್ಲಿ ಭಾರೀ ಪ್ರತಿಭಟನೆ ನಡೆಸಲಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೆಲವು ಕಟ್ಟಡ ನಿರ್ಮಾಣ ಸಂಸ್ಥೆಗಳು ಮತ್ತು ಪ್ರತಿಷ್ಠಿತ ವ್ಯಕ್ತಿಗಳೆನಿಸಿಕೊಂಡ ಕೆಲವರು ಮಹಾನಗರ ಪಾಲಿಕೆಯ ಕಟ್ಟಡ ನಿರ್ಮಾಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಅನಧಿಕೃತ ಕಟ್ಟಡ ಕಟ್ಟಲು ಕಾರಣವಾಗಿರುತ್ತಾರೆ. ಇದು ನಗರದ ಬೆಳವಣಿಗೆಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಈ ರೀತಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲು ಮಹಾನಗರ ಪಾಲಿಕೆಯ ನಗರ ಯೋಜನಾ ಅಧಿಕಾರಿಗಳ ಕರ್ತವ್ಯ ಲೋಪವು ಬಹು ಮುಖ್ಯ ಕಾರಣವಾಗಿದೆ. ಮಹಾನಗರ ಪಾಲಿಕೆ ಬಿಜೈ ವ್ಯಾಪ್ತಿಯ ಕೊಡಿಯಾಲ್ ಬೈಲ್ ಗ್ರಾಮದಲ್ಲಿನ ಟಿ.ಎಸ್ ಸಂಖ್ಯೆ 1561/9ಬಿ, ಡೋರ್ ಸಂಖ್ಯೆ 2-12-1025 ಇದರಲ್ಲಿ ಒಂದನೇ ಅಂತಸ್ತಿನಲ್ಲಿ ಪಾಲಿಕೆಯ ಪರವಾನಿಗೆ ಇಲ್ಲದೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಏಕ ನಿವೇಶನ ಒಪ್ಪಿಗೆ ಪಡೆಯದೆ ನಡೆಸುತ್ತಿರುವ ಅನಧಿಕೃತ ಕಟ್ಟಡ ನಿರ್ಮಾಣ. ಈ ಬಗ್ಗೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಪಾಲಿಕೆಯ ನಗರ ಯೋಜನಾ ವಿಭಾಗಕ್ಕೆ ದೂರು ದಾಖಲಿಸಿದ್ದರು.

ದಿನಾಂಕ 2/3/2016 ರಂದು ನಗರ ಯೋಜನಾ ಜಂಟಿ ನಿರ್ದೇಶಕರು ಕಟ್ಟಡ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸುವಂತೆ ನೋಟಿಸ್ ನೀಡಿದ್ದರು. ಆದರೆ ಎಲ್ಲಾ ಆದೇಶವನ್ನು ಕಡೆಗಣಿಸಿ ಕಾಮಗಾರಿಯನ್ನು ನಿರಂತರವಾಗಿ ಮುನ್ನಡೆಸುತ್ತಿದ್ದಾರೆ. ಸ್ಥಳೀಯರು ಈ ಬಗ್ಗೆ 28-9-2017ರಂದು ಪಾಲಿಕೆ ಆಯುಕ್ತರ ಗಮನಕ್ಕೆ ತಂದಾಗ ನಗರ ಯೋಜನಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅನಧಿಕೃತ ಕಟ್ಟಡದ ಶಟರ್ ಗೆ ಬೀಗ ಹಾಕಿದ್ದರೂ ಕಟ್ಟಡ ಮಾಲಕರಾದ ಮಹಮ್ಮದಾಲಿ ಮತ್ತು ಇತರರು ಸರಕಾರದ ಆದೇಶಗಳನ್ನು ಗಾಳಿಗೆ ತೂರಿ ನಿಯಮ ಬಾಹಿರವಾಗಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿದ್ದಾರೆ. ಮಹಾನಗರ ಪಾಲಿಕೆಯ ಕಾನೂನು ವಿಭಾಗದ ಅಧಿಕಾರಿಗಳು ಸದ್ರಿ ಅನಧಿಕೃತ ಕಟ್ಟಡದ ಬಗ್ಗೆ ಮೌನಕ್ಕೆ ಶರಣಾಗಿರುವುದು ಸಂಶಯಕ್ಕೆ ಎಡೆ ಮಾಡಿದೆ. ನಗರ ಪಾಲಿಕೆಯ ಯೋಜನಾ ವಿಭಾಗದ ಅಧಿಕಾರಿಗಳ ಕರ್ತವ್ಯ ಲೋಪ ಎದ್ದು ಕಾಣುತ್ತಿದ್ದು, ಅನಧಿಕೃತ ಕಟ್ಟಡದ ಕಾಮಗಾರಿಯನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ವಿಫಲರಾಗಿರುವುದು ಪಾಲಿಕೆಯ ಬಗ್ಗೆ ಜನರಲ್ಲಿ ವಿಶ್ವಾಸ ಕಳೆದುಕೊಂಡಂತಾಗಿದೆ. ಈ ಅನ್ಯಾಯವನ್ನು ತುಳುನಾಡ ರಕ್ಷಣಾ ವೇದಿಕೆ ಬಲವಾಗಿ ಖಂಡಿಸುತ್ತಿದ್ದು, ಪಾಲಿಕೆಯ ಅಧಿಕಾರಿಗಳು ಕೂಡಲೇ ಕಾಮಗಾರಿಯನ್ನು ನಿಲ್ಲಿಸತಕ್ಕದ್ದು ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ಅಕ್ರಮ ಕಟ್ಟಡಗಳಿರುವ ಪ್ರದೇಶಗಳಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಎಚ್ಚರಿಸಿರುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ಕೇಂದ್ರೀಯ ಮಂಡಳಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಕೋಶಾಧಿಕಾರಿ ಅಬ್ದುಲ್ ರಶೀದ್ ಜಪ್ಪು, ಜಿಲ್ಲಾಧ್ಯಕ್ಷರಾದ ಹಮೀದ್ ಹಸನ್ ಮಾಡೂರು, ಸಂಘಟನಾ ಕಾರ್ಯದರ್ಶಿ ಆನಂದ್ ಅಮೀನ್ ಅಡ್ಯಾರ್, ಯುವ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿರಾಜ್ ಅಡ್ಕರೆ, ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಶಕ್ತಿನಗರ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಬಂಗೇರ ಕುಡುಪು, ಆಸೀಫ್ ಮಾಡೂರು ಸೇರಿದಂತೆ ಇನ್ನು ಹಲವು ಮುಖಂಡರು ಉಪಸ್ಥಿತರಿದ್ದರು.

See also  ಈಚರ್ ಡಿಕ್ಕಿ: ಬೈಕ್ ಸವಾರ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು