News Kannada
Thursday, September 29 2022

ಕರಾವಳಿ

ಬಿಜೆಪಿ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿ ಗೌರವಿಸಿದೆ - 1 min read

Photo Credit :

ಬಿಜೆಪಿ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿ ಗೌರವಿಸಿದೆ

ಸುಳ್ಯ: ಈ ದೇಶದಲ್ಲಿ ಮಹಿಳೆಯರಿಗೆ ಶಕ್ತಿ ತುಂಬಿ ಮಹಿಳಾ ಸಬಲೀಕರಣ ಮಾಡಲು ಬಿಜೆಪಿಯಿಂದ ಮಾತ್ರ ಸಾಧ್ಯವಾಗಿದೆ. ಉನ್ನತ ಸ್ಥಾನಗಳನ್ನು ನೀಡುವ ಮೂಲಕ ಮಹಿಳೆಯರಿಗೆ ಬಿಜೆಪಿ ಗೌರವ ಸಲ್ಲಿಸಿದೆ ಎಂದು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದ್ದಾರೆ.

ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಬೃಹತ್ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುಟುಂಬವನ್ನು ಸಲಹುವಷ್ಟೇ ಸಮರ್ಥವಾಗಿ ದೇಶದ ಆಡಳಿತವನ್ನೂ ನಡೆಸಬಹುದು ಎಂಬುದನ್ನು ಮಹಿಳೆಯರು ತೋರಿಸಿಕೊಟ್ಟಿದ್ದಾರೆ. ರಕ್ಷಣಾ ಖಾತೆ, ವಿದೇಶಾಂಗ ಖಾತೆಗಳನ್ನು ಪಡೆಯುವ ಮೂಲಕ ನಮ್ಮ ದೇಶದಲ್ಲಿ ಇಬ್ಬರು ಮಹಿಳೆಯರು ಉನ್ನತ ಸ್ಥಾನಕ್ಕೇರಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಮಹಿಳಾ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಹಿಳೆಯರಿಗೆ ಇಷ್ಟು ದೊಡ್ಡ ಹುದ್ದೆ ಮತ್ತು ಗೌರವ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.

ನಾಡಿನ ಅಭಿವೃದ್ಧಿಗೆ ಮತ್ತು ಮಹಿಳಾ ಸಬಲೀಕರಣಕ್ಕೆ ರಾಜ್ಯದಲ್ಲಿಯೂ ಸಮರ್ಥ ಸರ್ಕಾರ ಬೇಕಾಗಿದೆ. ಬಿಜೆಪಿಯಿಂದ ಮಾತ್ರ ದೇಶ, ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯ. ಆದುದರಿಂದ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ಗೆ ನೈತಿಕತೆಯಿಲ್ಲ: ಅಂಗಾರ
ಶಾಸಕ ಎಸ್.ಅಂಗಾರ ಮಾತನಾಡಿ ಕಳೆದ ನಾಲ್ಕೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿಯನ್ನೂ ಮಾಡಿಲ್ಲ. ಕೇವಲ ಗಿಮಿಕ್ ಗಳ ಮೂಲಕ ಪ್ರಚಾರ ಪಡೆದ ಕಾಂಗ್ರೆಸ್ ಗೆ ಸಾಧನೆಯ ಆಧಾರದಲ್ಲಿ ಮತ ಕೇಳುವ ನೈತಿಕತೆ ಇಲ್ಲ ಎಂದು ಹೇಳಿದರು. ಅಪಪ್ರಚಾರ, ಗಿಮಿಕ್ ಗಳನ್ನು ಮಾಡಿಯೇ ಕಾಂಗ್ರೆಸ್ ಇಷ್ಟು ವರ್ಷ ಅಧಿಕಾರ ನಡೆಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ತಿಲಾಂಜಲಿಯನ್ನಿಡಲು ಕಾರ್ಯಕರ್ತರು ಪಣ ತೊಡಬೇಕು ಎಂದು ಅವರು ಕರೆ ನೀಡಿದರು.

ಹರಿದು ಬಂದ ಮಹಿಳಾ ಶಕ್ತಿ
ಪಂಜ ದೇವಸ್ಥಾನದ ಸಭಾಂಗಣದಲ್ಲಿ ನಡೆಯಬೇಕಾಗಿದ್ದ ಸಮರ್ಥನಾ ಸಮಾವೇಶಕ್ಕೆ ಸಭಾಭವನ ನೀಡಲು ಆಡಳಿತ ಮಂಡಳಿ ಅನುಮತಿ ನಿರಾಕರಿಸಿದ ಕಾರಣ ಕೊನೆಯ ಕ್ಷಣದಲ್ಲಿ ಸಮಾವೇಶವನ್ನು ಸುಳ್ಯದ ದುರ್ಗಾಪರಮೆಶ್ವರಿ ಕಲಾಮಂದಿರಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳ ಬದಲಾವಣೆಯ ಯಾವುದೇ ತೊಡಕು ಇಲ್ಲದೆ ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಮಂದಿ ಮಹಿಳಾ ಕಾರ್ಯಕರ್ತರು ಹರಿದು ಬಂದರು. ಸಭಾಭವನ ತುಂಬಿ ತುಳುಕಿದ ಸಮಾವೇಶದಲ್ಲಿ ಸ್ಥಳ ಸಾಕಾಗದೆ ಸಭಾಭವನದ ಹೊರಗೆ ಪೆಂಡಾಲ್ ಹಾಕಿ ಮತ್ತು ಊಟದ ಹಾಲ್ ನಲ್ಲಿ ಆಸನ ವ್ಯವಸ್ಥೆ ಮಾಡಿ ಕುಳಿತರು. ಸಮಾವೇಶ ವೀಕ್ಷಿಸಿದರು. ಅನುಮತಿ ನೀಡದಿದ್ದರೂ ಇಷ್ಟು ಮಂದಿ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಯಾಗಿದೆ. ಸಭಾಭವನ ನೀಡದೆ ಸಮಾವೇಶಕ್ಕೆ ತಡೆ ಮಾಡಲು ಪ್ರಯತ್ನಿಸಿದವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು.

See also  ಗಾಂಜಾ ಸಾಗಾಟ: ಇಬ್ಬರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು