News Kannada
Wednesday, October 05 2022

ಕರಾವಳಿ

ಕುಡಿಯುವ ನೀರು ಯೋಜನೆ ಕಾಮಗಾರಿ ಪರಿಶೀಲಿಸಿದ ರೈ - 1 min read

Photo Credit :

ಕುಡಿಯುವ ನೀರು ಯೋಜನೆ ಕಾಮಗಾರಿ ಪರಿಶೀಲಿಸಿದ ರೈ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ನೇತ್ರಾವತಿ ನದಿಯನ್ನು ಮೂಲವಾಗಿರಿಸಿಕೊಂಡು ಯು.ಐ.ಡಿ.ಎಸ್.ಎಸ್.ಎಂ.ಟಿ ಯೋಜನೆಯಡಿ 57.79 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಕುಡಿಯುವ ನೀರು ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಅವರು ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಸೋಮವಾರ ಸಂಜೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ 30 ವರ್ಷಗಳವರೆಗಿನ ಜನಸಂಖೆಯನ್ನು ಆಧರಿಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ದಿನವೊಂದಕ್ಕೆ ಒಟ್ಟು 42 ಲಕ್ಷ ಲೀಟರ್ ಕುಡಿಯುವ ನೀರು ಸಂಗ್ರಹಿಸಲಾಗುತ್ತದೆ. ನೇತ್ರಾವತಿ ನದಿ ತೀರದಲ್ಲಿ ಇಂಟೆಕ್ ವೆಲ್, ಜ್ಯಾಕ್ವೆಲ್, ಕನೆಕ್ಟಿಂಗ್ ಪೈಪ್ಲೈನ್ ಅಳವಡಿಸಲಾಗಿದ್ದು, ಜಕ್ರಿಬೆಟ್ಟುವಿನಲ್ಲಿ ಜಲಶುದ್ದೀಕರಣ ಘಟಕ ಮತ್ತು ರೇಚಕ ಸ್ಥಾವರ ನಿರ್ಮಿಸಲಾಗಿದೆ. ಕಾಮಾಜೆ, ಕುಸರ್ಗುಡ್ಡೆ, ಮೈರಾನ್ಪಾದೆ, ಉಪ್ಪುಗುಡ್ಡೆ, ಶಾಂತಿಗುಡ್ಡೆ, ಲೊರಟೆಪದವು, ಗೂಡಿನಬಳಿ ಸಹಿತ ಒಟ್ಟು 7 ಕಡೆಗಳಲ್ಲಿ ನೀರಿನ ಟ್ಯಾಂಕ್ ಅನ್ನು ನಿರ್ಮಿಸಲಾಗಿದೆ ಎಂದು ವಿವರಿಸಿದ ಅವರು, ಈಗಾಗಲೇ 95 ಕಿ.ಮೀ. ಪೈಪ್ಲೈನ್ ಅಳವಡಿಸಲಾಗುತ್ತಿದ್ದು, ಈ ಪೈಕಿ 55 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಮಂದಕ್ಕೆ ಹೆಚ್ಚುವರಿಯಾಗಿ ಪೈಪ್ಲೈನ್ ಕಾಮಗಾರಿ ವಿಸ್ತರಿಸುವ ನಿಟ್ಟಿನಲ್ಲಿ ಸುಮಾರು 13 ಲಕ್ಷ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

See also  ಕುಡಿಯುವ ನೀರಿನ ಪೈಪ್ ತುಂಡಿರಿಸಿದ ಅರಣ್ಯ ಇಲಾಖೆ- ನೀರಿಲ್ಲದೆ ಸಮಸ್ಯೆಗೆ ಸಿಲುಕಿದ 15 ಕುಟುಂಬಗಳ ಪರದಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು