News Kannada
Wednesday, October 05 2022

ಕರಾವಳಿ

ವಿದ್ಯಾಭ್ಯಾಸ ಪೂರ್ತಿಗೊಳಿಸಿದವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಲಹೆ - 1 min read

Photo Credit :

ವಿದ್ಯಾಭ್ಯಾಸ ಪೂರ್ತಿಗೊಳಿಸಿದವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಲಹೆ

ಉಜಿರೆ: ಶೈಕ್ಷಣಿಕ ಹಂತ ಪೂರ್ಣಗೊಳಿಸಿದ ನಂತರ ಉದ್ಯೋಗಾವಕಾಶ ಲಭ್ಯವಾದಾಗ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಬದ್ಧತೆ ತೋರಬೇಕು ಎಂದು ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎಸ್ ಡಿಎಂ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿತವಾದ ಕಾರ್ಯಕ್ರಮದಲ್ಲಿ ಎಸ್ ಡಿಎಂ ಎಜುಕೇಶನಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ವೇತನ ವಿತರಿಸಿ ಅವರು ಮಾತನಾಡಿದರು.

ವ್ಯಾಸಂಗ ನಿರತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ಎಸ್ ಡಿಎಂ ಎಜ್ಯುಕೇಶನಲ್ ಟ್ರಸ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ ವೇತನ ಒದಗಿಸಲಾಗುತ್ತಿದೆ. ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಉದಾತ್ತ ಪರಿಕಲ್ಪನೆಯ ಬೆಂಬಲದೊಂದಿಗೆ ಆರಂಭವಾದ ಈ ವಿದ್ಯಾರ್ಥಿ ವೇತನ ಯೋಜನೆಯ ಅನುಕೂಲ ಪಡೆಯುವ ವಿದ್ಯಾರ್ಥಿಗಳು ಅಧ್ಯಯನ ಪೂರ್ಣಗೊಂಡ ನಂತರದ ವೃತ್ತಿಜೀವನದ ಸಂದರ್ಭದಲ್ಲಿ ಸಮಾಜಕ್ಕೆ ಉಪಯುಕ್ತವೆನ್ನಿಸುವ ನೆರವಿನ ಕಾರ್ಯಕ್ರಮಗಳ ಜೊತೆಗೆ ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದರು.

ಆರಂಭದಲ್ಲಿ ಈ ವಿದ್ಯಾರ್ಥಿ ವೇತನದ ಉದ್ದೇಶಕ್ಕಾಗಿಯೇ ಹತ್ತು ಲಕ್ಷ ಮೀಸಲಿರಿಸಲಾಗುತ್ತಿತ್ತು. ಈಗ ಪ್ರತಿವರ್ಷ 90 ಲಕ್ಷ ರೂ.ಗಳನ್ನು ವಿವಿಧ ಹಂತಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯೋಜನಕ್ಕಾಗಿ ಒದಗಿಸಲಾಗುತ್ತಿದೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಬದ್ಧತೆಯೊಂದಿಗೆ ಗುರುತಿಸಿಕೊಳ್ಳಬೇಕು. ಅದೇ ಸಂಸ್ಥೆಗೆ ನೀಡುವ ಮಹತ್ವದ ಕೊಡುಗೆ ಎಂದರು.

ಎಸ್ ಡಿಎಂ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷರಾದ ಪ್ರೊ.ಎಸ್.ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಕೆಲಸದಲ್ಲಿ ಶ್ರದ್ಧೆ ಇರದ ಕಾರಣಕ್ಕಾಗಿಯೇ ಅವಕಾಶಗಳು ಕೈತಪ್ಪುತ್ತವೆ. ಯುವಕರು ಶ್ರದ್ಧೆಯಿಂದ ನಿರ್ದಿಷ್ಟ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಬದ್ಧತೆ ತೋರಬೇಕು. ಜನರ ಹಿತರಕ್ಷಣೆಗಾಗಿ ಶ್ರಮಿಸಬೇಕು. ನಿರಂತರ ಪ್ರಯತ್ನಗಳ ಜೊತೆಗೆ ಬದುಕಿನಲ್ಲಿ ಯಶಸ್ಸು ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ ಡಿಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎಸ್ ಮೋಹನ್ ನಾರಾಯಣ್ ಉಪಸ್ಥಿತರಿದ್ದರು. ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.

See also  ಸ್ಟ್ರೆಚರ್ ನಲ್ಲಿ ಬಂದು ಮತ ಚಲಾಯಿಸಿ ಮಾದರಿಯಾದ ಯುವಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು