News Kannada
Friday, October 07 2022

ಕರಾವಳಿ

ಟಿಪ್ಪು ಜಯಂತಿ ಆಚರಣೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ಧರಾಮಯ್ಯ - 1 min read

Photo Credit :

ಟಿಪ್ಪು ಜಯಂತಿ ಆಚರಣೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ಧರಾಮಯ್ಯ

ಮಂಗಳೂರು: ಯಾರೇ ವಿರೋಧ ಮಾಡಿದರೂ ಸಹ ಟಿಪ್ಪು ಜಯಂತಿ ಆಚರಣೆ ನಡೆದೇ ನಡೆಯತ್ತೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟಿಪ್ಪು ಜಯಂತಿ ವಿರೋಧಿಗಳಿಗೆ ಸ್ಪಷ್ಟ ಉತ್ತರ ರವಾನಿಸಿದ್ದಾರೆ.

ಬಂಟ್ವಾಳದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ ಅವರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಗೆ ಮಾತನಾಡಿದರು. ಬಿಜೆಪಿಯವರು ಟಿಪ್ಪು ಜಯಂತಿ ವಿರೋಧಿಸುತ್ತಾ ಇದ್ದಾರೆ. ಆದರೆ ಯಾರೇ ವಿರೋಧ ಮಾಡಿದರೂ ಟಿಪ್ಪು ಜಯಂತಿ ಆಚರಣೆ ನಿಲ್ಲಲ್ಲ ಎಂದರು.

ಟಿಪ್ಪು ಜಯಂತಿ ಆಚರಣೆ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಪ್ರೋಟೊಕಾಲ್ ಪ್ರಕಾರ ಹೆಸರು ಹಾಕುವುದು ನಮ್ಮ ಕರ್ತವ್ಯ. ಕಾರ್ಯಕ್ರಮಕ್ಕೆ ಬರುವುದು, ಬಿಡುವುದು ಅವರ ಇಷ್ಟ ಎಂದು ಸಿದ್ಧರಾಮಯ್ಯ ಹೇಳಿದರು.

ಬಿಜೆಪಿ ರಾಜ್ಯಾಧಕ್ಷ್ಯ ಯಡಿಯೂರಪ್ಪ ಕಲ್ಲಿದ್ದಲು ಹಗರಣದ ಬಗ್ಗೆ ಮಾಡಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಯಡಿಯೂರಪ್ಪ ಮಾಡಿರುವ ಆರೋಪ ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ. ಆರೋಪ ಆಧಾರರಹಿತ ಮತ್ತು ರಾಜಕೀಯ ದುರುದ್ದೇಶಪೂರಿತ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಡಿಕೆಶಿ ಸಹಿತ ಹಲವಾರು ಮಂದಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

See also  ನ.22ರಂದು ಕರ್ನಾಟಕ ಪೋರ್ಟ್ಸ್, ಶಿಪ್ಪಿಂಗ್ ಆ್ಯಂಡ್ ಲಾಜಿಸ್ಟಿಕ್ ಸಮ್ಮೇಳನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು