News Kannada
Wednesday, November 30 2022

ಕರಾವಳಿ

ಪಡಿತರ ತೂಕದಲ್ಲಿ ವ್ಯತ್ಯಾಸ: ಅಧಿಕಾರಿಗಳ ವಿರುದ್ಧ ಶಾಸಕರು ಗರಂ - 1 min read

Photo Credit :

ಪಡಿತರ ತೂಕದಲ್ಲಿ ವ್ಯತ್ಯಾಸ: ಅಧಿಕಾರಿಗಳ ವಿರುದ್ಧ ಶಾಸಕರು ಗರಂ

ಬೆಳ್ತಂಗಡಿ: ಪಡಿತರ ತೂಕದಲ್ಲಿನ ವ್ಯತ್ಯಾಸ, ವಿದ್ಯುತ್ ತಂತಿಗಳ ಸಮಸ್ಯೆ, ಸಂಚಾರ ನಿಯಂತ್ರಣದಲ್ಲಿನ ತೊಂದರೆ ಮತ್ತಿತರ ತಾಲೂಕಿನ ಸಮಸ್ಯೆಗಳ ಬಗ್ಗೆ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆದು ಪರಿಹಾರ ಕಂಡುಕೊಳ್ಳಲಾಯಿತು. ಸಭೆಯು ತಾ.ಪಂ. ಸಭಾಂಗಣದಲ್ಲಿ ಶಾಸಕ ವಸಂತ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕಿನಲ್ಲಿ ಪಡಿತರ ಚೀಟಿ ಅಂಗಡಿಗಳಿಗೆ ಅಕ್ಕಿ ಸರಬರಾಜು ಮಾಡುವ ವೇಳೆ ತೂಕದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ಇದರಿಂದ ಪಡಿತರ ಅಂಗಡಿಗಳಿಗೆ ನಷ್ಟ ಉಂಟಾಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ಆಗ್ರಹಿಸಿದರು. ಇದಕ್ಕೆ ಗರಂ ಆದ ಶಾಸಕರು ಪ್ರತೀ ಕೆಡಿಪಿ ಸಭೆಯಲ್ಲಿ ಇಂತಹ ಆರೋಪ ಬರುತ್ತಿದೆ. ತಕ್ಷಣ ಸಂಬಂದಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಗೋಣಿಯಲ್ಲಿದ್ದ ಅಕ್ಕಿಯನ್ನು ಯಾರು ತೆಗೆಯುತ್ತಾರೆ, ಎಲ್ಲಿ ತೆಗೆಯುತ್ತಾರೆ ಎಂಬುದನ್ನು ಪತ್ತೆಹಚ್ಚಬೇಕು. ಪಡಿತರ ಅಕ್ಕಿ ಸಾಗಾಟ ಮಾಡುವ ವಾಹನದ ಹಿಂದೆ ಅಧಿಕಾರಿಗಳು ಹೋಗಿ ಪತ್ತೆ ಹಚ್ಚಬೇಕು. ಮುಂದೆ ಇಂತಹ ಘಟನೆಗಳು ನಡೆದರೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಳೆಂಜ, ನಿಡ್ಲೆ, ಶಿಶಿಲ ಮಂತಾದೆಡೆ ಹಳೆ ವಿದ್ಯುತ್ ತಂತಿಗಳನ್ನು ಬದಲಾಯಿಸಲು ಸಭೆಯಲ್ಲಿ ಅನೇಕ ಬಾರಿ ಪ್ರಸ್ತಾಪ ಸಲ್ಲಿಸಲಾಗಿತ್ತು. ಈ ಬಗ್ಗೆ ಕ್ರಮಕೈಗೊಂಡಿಲ್ಲ ಎಂದು ಕೊರಗಪ್ಪ ನಾಯ್ಕ ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ಮಾತನಾಡಿ, ಈಗಾಗಲೇ 1.3 ಕೋಟಿ ರೂ. ಮಂಜೂರಾಗಿದ್ದು, ಇದಕ್ಕೆ ಅತ್ಯಾಧುನಿಕ ಉಪಕರಣಗಳು ಬರಬೇಕಾಗಿದೆ. ಈಗಾಗಲೇ ಟೆಂಡರ್ ಮುಗಿದಿದೆ. ಎರಡು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಲ್ಲದೆ ತಾಲೂಕಿಗೆ 360 ಟ್ರಾನ್ಸ್ ಪಾರ್ಮರ್ ಮಂಜೂರಾಗಿದ್ದು, ಎಲ್ಲಾ ಅಳವಡಿಕೆ ಕಾರ್ಯ ಶೀಘ್ರ ನಡೆಯಲಿದೆ ಎಂದರು.

ಉಜಿರೆ ಗುರುವಾಯನಕೆರೆ ಮಧ್ಯೆ ಟ್ರಾಫಿಕ್ ನಿಯಂತ್ರಣದ ಬಗ್ಗೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರಿಗೆ ಶಾಸಕ ಬಂಗೇರ, ರಸ್ತೆ ಮಧ್ಯದಲ್ಲಿ ವಾಹನ ನಿಲ್ಲಿಸುವವರಿಗೆ ನಿರ್ದಕ್ಷಿಣ್ಯವಾಗಿ ಕೇಸು ದಾಖಲಿಸಬೇಕು. ಸಮರ್ಥ ಪೊಲೀಸ್ ಸಿಬ್ಬಂದಿಯನ್ನು ಟ್ರಾಫಿಕ್ ನಿಯಂತ್ರಣಕ್ಕೆ ನೇಮಿಸಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು.

ಸಭೆಯಲ್ಲಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಜಿ.ಪಂಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ್ ಕೆ. ಅಯ್ಯಣ್ಣನವರ್ ಉಪಸ್ಥಿತರಿದ್ದರು. ತಾ.ಪಂ. ಸಂಯೋಜಕ ಜಯನಂದ್ ಹಾಗೂ ಮ್ಯಾನೇಜರ್ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

See also  ಸುಳ್ಯದಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು