News Kannada
Friday, December 02 2022

ಕರಾವಳಿ

ಮತ್ತೆ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ: ನಂದಿಸಲು ಅಗ್ನಿಶಾಮಕದಳದವರ ಹರಸಾಹಸ

Photo Credit :

ಮತ್ತೆ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ: ನಂದಿಸಲು ಅಗ್ನಿಶಾಮಕದಳದವರ ಹರಸಾಹಸ

ಬೆಂಗಳೂರು: ಬೆಳ್ಳಂದೂರು ಕೆರೆಯ ಇಬ್ಬಲೂರು ಮತ್ತು ಈಜಿಪುರ ಕಡೆಯ ದಡದಲ್ಲಿ ಶುಕ್ರವಾರ ಬೆಂಕಿ ಹತ್ತಿ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿದಕೊಂಡಿದೆ. ಇದರಿಂದ ಆವರಿಸಿಕೊಂಡ ದಟ್ಟವಾದ ಹೊಗೆಗೆ ಜನರು ಆತಂಕಗೊಂಡಿದ್ದರು. ಬೆಂಕಿ ನಂದಿಸೋಕೆ ಅಗ್ನಿಶಾಮಕ ದಳದ 70 ಸಿಬ್ಬಂದಿ ಹಾಗೂ ಸೇನಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು ರಾತ್ರಿ 10ಗಂಟೆಯಾದರೂ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು.

ಇನ್ನೂ ಬೆಳ್ಳಂದೂರು ಕೆರಯಲ್ಲಿ ಶೇಖರಣೆಯಾಗಿರುವ ರಾಸಾಯನಿಕ ಪ್ರಮಾಣ ಹೆಚ್ಚಿದ್ದು ಇದರಿಂದಲೂ ಹೆಂಬಕಿ ಹತ್ತಿರುವ ಸಾಧ್ಯತೆಗಳು ಇದೆ. ಇದನ್ನು ಸ್ವಚ್ಛ ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅನೇಕ ಬಾರಿ ಹೇಳಿದರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ), ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಎಲ್ಸಿಡಿಎ), ಬಿಡಿಎ ಹಾಗೂ ಬಿಬಿಎಂಪಿ ನಿರ್ಲಕ್ಯ ಮಾಡಿದೆ ಎಂದು ಸ್ಥಳೀಯರು ದೂರಿದ್ದಾರೆ. ಆದಷ್ಟು ಬೇಗ ಕೆರೆಯನ್ನು ಸ್ವಚ್ಛ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಬಿಡಿಎ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇನ್ನೊಂದು ಕಡೆಯಲ್ಲಿ ಈ ಹುಲ್ಲುಗಾವಲಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಸಾಧ್ಯತೆಯೂ ಇರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ. ಈ ಹಿಂದೆಯೂ ಕೆರಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.

 

See also  ಉಳ್ಳಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು