News Kannada
Thursday, December 01 2022

ಕರಾವಳಿ

ವಿವಾದಾತ್ಮಾಕ ಹೇಳಿಕೆ: ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲು - 1 min read

Photo Credit :

ವಿವಾದಾತ್ಮಾಕ ಹೇಳಿಕೆ: ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಜನರಲ್ಲಿ ಧಾರ್ಮಿಕ ದ್ವೇಷ ಉಂಟಾಗುವಂತೆ ಮಾತನಾಡಿದ ಮತ್ತು ಧರ್ಮ, ಧರ್ಮಗಳ ನಡುವೆ ಸೌಹಾರ್ದತೆಗೆ ಭಂಗ ತಂದ ಆರೋಪಡಿ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಅವರು ಮಂಗಳವಾರ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಸೋಮವಾರ ರಾತ್ರಿ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಸಂದರ್ಭ, ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಶಾಸಕ ಸುನೀಲ್ ಕುಮಾರ್ ಸಭೆಯನ್ನುದ್ದೇಶಿಸಿ ಸಾರ್ವಜನಿಕರಿಗೆ ಪ್ರಚೋದನಾತ್ಮಕವಾಗಿ ಮಾತನಾಡಿ, ಜನರಲ್ಲಿ ಧಾರ್ಮಿಕ ದ್ವೇಷ ಉಂಟಾಗುವಂತೆ ಮಾಡಿದ್ದಾರೆ. ಧರ್ಮ, ಧರ್ಮಗಳ ನಡುವೆ ಸೌಹಾರ್ದತೆಗೆ ಭಂಗ ತಂದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಅಲ್ಲಾನ ಮತ್ತು ರಾಮನ ನಡುವೆ ನಡೆಯುವ ಚುನಾವಣೆಯಾಗಿದ್ದು, ರಮಾನಾಥ ರೈ ಮತ್ತು ರಾಜೇಶ್ ನಾಯ್ಕ್ ನಡುವೆ ನಡೆಯುವ ಚುನಾವಣೆಯಲ್ಲ ಎಂದು ಹೇಳಿದ್ದಲ್ಲದೆ, ಅಲ್ಲಾನನ್ನು ಪ್ರೀತಿಸುವ ವ್ಯಕ್ತಿಗೆ ಮತ ಹಾಕ್ತೀರೋ, ಅಥವಾ ರಾಮನನ್ನು ಪ್ರೀತಿಸುವ ವ್ಯಕ್ತಿಗೆ ಮತ ಹಾಕುತ್ತೀರೋ ಎಂದು ಸಾರ್ವಜನಿಕರಿಗೆ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾಗಿ ಪ್ರಶಾಂತ್ ಕುಲಾಲ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಬಂಟ್ವಾಳ ನಗರ ಠಾಣಾ ಪೊಲೀಸರು ಅಪರಾಧ ಕ್ರಮಾಂಕ 16/2018 ಕಲಂ 153(ಎ), 505(2) ಐಪಿಸಿಯಂತೆ ಪ್ರಕರಣ ದಾಖಲಿಸಿದ್ದಾರೆ.

 

 

See also  ಸುಳ್ಯ: ಅಡಕೆ ಕೊಳೆರೋಗಕ್ಕೆ ಪೂರ್ಣ ಪ್ರಮಾಣದ ಪರಿಹಾರ ನೀಡಲು ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು