News Kannada
Sunday, November 27 2022

ಕರಾವಳಿ

ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ - 1 min read

Photo Credit :

ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 69ನೇ ಗಣರಾಜ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸುಮಾರು 12 ಸಾವಿರಕ್ಕೂ ಮಿಕ್ಕ ವಿದ್ಯಾರ್ಥಿಗಳು ಸಾರ್ವಜನಿಕರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ರೋವರ್ಸ್ ರೇಂಜರ್ಸ್ ಬ್ಯಾಂಡ್ ಸೆಟ್ನೊಂದಿಗೆ, ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಫ್ರೊ. ಟಿ ಪ್ರಕಾಶ್ ಪ್ರಭು ಅವರ ನಿರ್ದೇಶನದಲ್ಲಿ  ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ 500 ವಿದ್ಯಾರ್ಥಿಗಳಿಂದ ಸಮೂಹ ಗಾಯನ ನಡೆಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ದೇಶದ ವಿವಿಧ ಸಂಸ್ಕೃತಿಯನ್ನು ತೋರ್ಪಡಿಸುವ ಉಡುಗೆಗಳನ್ನು ತೊಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಥಮ ಬಾರಿಗೆ  ಕೇಸರಿ, ಬಿಳಿ, ಹಸಿರು ವಸ್ತ್ರಗಳನ್ನು ಧರಿಸಿದ ವಿದ್ಯಾರ್ಥಿಗಳು ಭಾರತದ ನಕ್ಷೆಯನ್ನು ರಚಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದರ ಜೊತೆಗೆ 10 ಮೀಟರ್  ಉದ್ದ ಹಾಗೂ 6 ಮೀಟರ್ ಅಗಲದ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ದೆಹಲಿಯ ಇಂಡಿಯಾ ಗೇಟ್ ನಲ್ಲಿ ಗಣರಾಜ್ಯೋತ್ಸವದ ಆಚರಣೆಯ ನೇರಪ್ರಸಾರವನ್ನು ಎಲ್.ಇ.ಡಿ ಪರದೆಯ ಮೂಲಕ ವೀಕ್ಷಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ , ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ, ಎಸ್.ಡಿ.ಎಮ್ ಸಂಸ್ಥೆಯ ವಿವಿಧ ಕಾಲೇಜಿನ  ಪ್ರಾಂಶುಪಾಲರು ಹಾಗೂ ಮುಖ್ಯಸ್ಥರು ಊರ ಬಾಂಧವರೆಲ್ಲ ಗಣರಾಜೋತ್ಸವದ ಸಂದರ್ಭದಲ್ಲಿ ಉಪಸ್ಥಿತರಿದ್ದರು.          

 

 

 

 

See also  ಆಳ್ವಾಸ್ ಚಿತ್ರಸಿರಿ, ಆಳ್ವಾಸ್ ಛಾಯಾಚಿತ್ರಸಿರಿ ಪ್ರಶಸ್ತಿ ಪ್ರದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು