News Kannada
Wednesday, November 30 2022

ಕರಾವಳಿ

ಜ್ಯೋತಿಷಿ ತಂದೆ, ಸಹೋದರನಿಂದ ಮಗನ ಬರ್ಬರ ಹತ್ಯೆ - 1 min read

Photo Credit :

ಜ್ಯೋತಿಷಿ ತಂದೆ, ಸಹೋದರನಿಂದ ಮಗನ ಬರ್ಬರ ಹತ್ಯೆ

ಬೆಳ್ತಂಗಡಿ: ಯುವಕನೊಬ್ಬನನ್ನು ಆತನ ತಂದೆ ಹಾಗೂ ಸಹೋದರ ಸೇರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕಸಬಾ ಗ್ರಾಮದ ಮಟ್ಲ ಎಂಬಲ್ಲಿ ನಿನ್ನೆ ರಾತ್ರಿ 9ಕ್ಕೆ ನಡೆದಿದೆ. ಮೃತರನ್ನು ನವೀನ್ (28) ಎಂದು ಗುರುತಿಸಲಾಗಿದೆ. ಈತನ ತಂದೆ ಜ್ಯೋತಿಸಿಯಾಗಿರುವ ಮಂಜುನಾಥ ಮತ್ತು ಸಹೋದರ ರಾಘವೇಂದ್ರ ಕೊಲೆ ಆರೋಪಿಗಳಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ಮಗನ ಸಾವಿನಲ್ಲಿ ಅಂತ್ಯವಾಗಿದೆ.

ಕಳೆದ ಡಿಸೆಂಬರ್ 31ರಂದು ರಾತ್ರಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ನವೀನ್ ಹಾಗೂ ಮಂಜುನಾಥ್ ಅವರಿಗೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ಜಗಳ ಉಂಟಾಗಿತ್ತು. ಈ ವೇಳೆ ಮಂಜುನಾಥ್ ಮೇಲೆ ನವೀನ್ ಹಲ್ಲೆ ನಡೆಸಿದೆ ಎನ್ನಲಾಗಿದೆ. ಈ ದ್ವೇಷದ ಹಿನ್ನೆಲೆ ಭಾನುವಾರ ರಾತ್ರಿ ನವೀನ್ ಹಾಗೂ ಮಂಜುನಾಥ್ ನಡುವೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ಮಂಜುನಾಥ್ ಮತ್ತು ರಾಘವೇಂದ್ರ ಸೇರಿಕೊಂಡು ನವೀನ್ ಹೊಟ್ಟೆ ಹಾಗೂ ತೊಡೆಗೆ ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇವರು ಹಾಸನ ಮೂಲದವರಾಗಿದ್ದು, ಮೃತ ನವೀನ್ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಘಟನೆ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ನವೀನ್ ಪತ್ನಿ ಬೇಬಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

See also  ನೂರಾಲ್ಬೆಟ್ಟು: ದುಸ್ಥಿತಿಯ ರಸ್ತೆಯಲ್ಲಿ ವಿಶ್ವಪರಿಸರ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು