News Kannada
Sunday, November 27 2022

ಕರಾವಳಿ

ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ನಾಡಿನ ಅಭಿವೃದ್ಧಿ ಸಾಧ್ಯ- ಡಿ.ವಿ.ಸದಾನಂದ ಗೌಡ - 1 min read

Photo Credit :

ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ನಾಡಿನ ಅಭಿವೃದ್ಧಿ ಸಾಧ್ಯ- ಡಿ.ವಿ.ಸದಾನಂದ ಗೌಡ

ಸುಳ್ಯ: ಜನಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಒಟ್ಟಾಗಿ ದುಡಿದು ಪ್ರಾಮಾಣಿಕವಾದ ಪ್ರಯತ್ನ ನಡೆಸಿದ್ದಲ್ಲಿ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಕೆಂದ್ರ ಸಾಂಖ್ಯಿಕ, ಅಂಕಿ ಅಂಶ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಗ್ರಾಮ ವಿಕಾಸ ಸಮಿತಿ ಮಂಡೆಕೋಲು, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯಿತಿ ಮತ್ತು ಶ್ರೀ ಮಹಾವಿಷ್ಣು ದೇವಸ್ಥಾನ ಮಂಡೆಕೋಲು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಸಮಗ್ರ ಗ್ರಾಮ ವಿಕಾಸ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸುಳ್ಯ ತಾಲೂಕಿನ ಗಡಿ ಗ್ರಾಮವಾದ ಮಂಡೆಕೋಲಿನಲ್ಲಿ ಈ ಹಿಂದೆ `ಅಪರಾಧ ಮುಕ್ತ ಗ್ರಾಮ ಜನಾಂದೋಲನ’ದಂತಹಾ ಮಾದರಿ ಕಾರ್ಯಕ್ರಮಗಳನ್ನು ರೂಪಿಸಿ ಗಮನ ಸೆಳೆದಿತ್ತು. ಇದೀಗ ಗ್ರಾಮದ ಸಮಗ್ರ ವಿಕಾಸಕ್ಕೆ ಪಣತೊಟ್ಟು ನಡೆಸುವ ಕಾರ್ಯಕ್ರಮಗಳಿಗೆ ಎಲ್ಲರೂ ಕೈ ಜೋಡಿಸಿ ಗ್ರಾಮವನ್ನು ಆದರ್ಶ ಗ್ರಾಮವಾಗಿಸಬೇಕು ಎಂದು ಅವರು ಕರೆ ನೀಡಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ಮಂಡೆಕೋಲು ಗ್ರಾ.ಪಂ.ಅಧ್ಯಕ್ಷೆ ಮೋಹಿನಿ, ಮಾಜಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೆಟ್ಟಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಮಾವಜಿ, ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಚಾಕೋಟೆ, ಮಾಜಿ ಅಧ್ಯಕ್ಷರಾದ ಮಾವಜಿ ಮುದ್ದಪ್ಪ ಗೌಡ, ಕರುಣಾಕರ ಪಾತಿಕಲ್ಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂರಾರು ಮಂದಿ ಗ್ರಾಮಸ್ಥರು ಆಗ
ಮಿಸಿದ್ದರು.

ಮಾದರಿ ಗ್ರಾಮವಾಗಿಸಲು ಗ್ರಾಮ ವಿಕಾಸದ ಕಲ್ಪನೆ: ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡುವುದರ ಜೊತೆಗೆ ಗ್ರಾಮವನ್ನು ವ್ಯಾಜ್ಯ ಮುಕ್ತ, ತ್ಯಾಜ್ಯ ಮುಕ್ತ, ಅಪರಾಧ ಮುಕ್ತವಾಗಿಸಿ ಮಾದರಿ ಗ್ರಾಮವನ್ನಾಗಿ ರೂಪಿಸುವುದು ಸಮಗ್ರ ಗ್ರಾಮ ವಿಕಾಸ ಯೋಜನೆಯ ಕಲ್ಪನೆ. ಪಂಚವಾರ್ಷಿಕ ಯೋಜನೆ ರೂಪಿಸಿ ಗ್ರಾಮದಲ್ಲಿ ಜಲ ಸಂರಕ್ಷಣೆ, ಮೂಲಭೂತ ಅಭಿವೃದ್ಧಿ ನಡೆಸುವುದು ಮತ್ತು ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ನಾಡನ್ನು ಸಂಪನ್ನಗೊಳಿಸುವುದು ಯೋಜನೆಯ ಉದ್ದೇಶ. ಗ್ರಾಮ ವಿಕಾಸ ಸಮಿತಿಯ ಜೊತೆಗೆ ಎಲ್ಲರನ್ನೂ ಸೇರಿಸಿ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದು ಗ್ರಾಮ ವಿಕಾಸ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

See also  ಪಾಳು ಬಿಟ್ಟ ಗದ್ದೆಗಳಿಗೆ ಕಾಯಕಲ್ಪ ನೀಡಲು ಗದ್ದೆಗಿಳಿದ ನಳಿನ್‌ ಕುಮಾರ್‌ ಕಟೀಲ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

180

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು