News Kannada
Wednesday, October 05 2022

ಕರಾವಳಿ

ಸುಳ್ಯದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮ್ಮಿಲನ ಸಮಾರೋಪ - 1 min read

Photo Credit :

ಸುಳ್ಯದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮ್ಮಿಲನ ಸಮಾರೋಪ

ಸುಳ್ಯ: ಮಹಿಳೆಯೊಬ್ಬಳು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಿದರೆ ಮನೆ, ಸಮಾಜ, ರಾಜ್ಯ ಮತ್ತು ದೇಶ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಿದಂತೆ. ಆದುದರಿಂದ ದೇಶವು ಆರ್ಥಿಕ ಶಕ್ತಿಯಾಗಿ ಬೆಳೆಯಲು ಪ್ರತಿಯೊಬ್ಬ ಮಹಿಳೆಯೂ ಆರ್ಥಿಕ ಸಬಲೀಕರಣವನ್ನು ಸಾಧಿಸಬೇಕು ಎಂದು ವಿರಾಜಪೇಟೆಯ ಶಾಸಕ, ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆ ಕೊಡಗು ಜಿಲ್ಲೆ, ಜಿಲ್ಲಾ ಮಹಿಳಾ ಸಮ್ಮಿಲನ ವ್ಯವಸ್ಥಾಪನಾ ಸಮಿತಿ ಸುಳ್ಯ ಮತ್ತು ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮ್ಮಿಲನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. 2022ರ ವೇಳೆಗೆ ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ದೇಶವಾಗಬೇಕೆಂಬುದು ನಮ್ಮ ಕಲ್ಪನೆ. ಪ್ರತಿಯೊಬ್ಬರಿಗೂ ಆಹಾರ, ಮನೆ, ಉದ್ಯೋಗ ಮತ್ತು ಉತ್ತಮ ಬದುಕು ಕೊಡುವ ಮೂಲಕ ಸಮೃದ್ಧ ಜೀವನದತ್ತ ಮುನ್ನಡೆಯಬೇಕಾಗಿದೆ.

ಅದನ್ನು ಸಾಧಿಸಲು ಪ್ರತಿಯೊಬ್ಬರೂ ಪ್ರಯತ್ನ ನಡೆಸಬೇಕು ಎಂದು ಕರೆ ನೀಡಿದರು. ಪ್ರತಿಯೊಬ್ಬರೂ ಮತದಾನದ ಮಹತ್ವವನ್ನೂ ತಿಳಿದುಕೊಂಡು ಜಾಗೃತರಾಗಬೇಕು. ನಾವು ಭ್ರಷ್ಟರಾಗದಿದ್ದರೆ ನಮ್ಮನ್ನು ಆಳುವ ಜನಪ್ರತಿನಿಧಿಗಳೂ ಭ್ರಷ್ಟರಾಗಲು ಸಾಧ್ಯವಿಲ್ಲ. ನಮ್ಮಲ್ಲಿರುವ ಸ್ವಾರ್ಥ ಮತ್ತು ಭ್ರಷ್ಟತೆಯನ್ನು ಬಿಟ್ಟು ರಾಜ್ಯದ ಮತ್ತು ದೇಶದ ಬಗ್ಗೆ ಚಿಂತನೆ ನಡೆಸಿ ಮತ ಚಲಾಯಿಸಬೇಕು ಆಗ ಮಾತ್ರ ವ್ಯವಸ್ಥೆ ಪರಿಶುದ್ಧವಾಗಬಹುದು. ಸಮಾಜದಲ್ಲಿ ಅಶಾಂತಿ, ಅರಾಜಕತೆ ಸೃಷ್ಠಿಯಾಗುವುದನ್ನು ತಡೆಯುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ಅವರು ನೆನಪಿಸಿದರು.

ಸಮಾರೋಪ ಭಾಷಣ ಮಾಡಿದ ಶ್ರೀ ಕ್ಷತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಗ್ರಾಮ, ರಾಜ್ಯ, ದೇಶದ ಆರ್ಥಿಕ ಪ್ರಗತಿಯಾಗಲು ಮಹಿಳೆಯರು ಆರ್ಥಿಕ ಸ್ವಾಬಲಂಬನೆಯನ್ನು ಸಾಧಿಸಬೇಕಾಗಿದೆ. ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಪ್ರಯತ್ನ ನಡೆಸಬೇಕು ಎಂದರು.

ದ.ಕ.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ನಗರ ಪಂಚಾಯಿತಿ ಅಧ್ಯಕ್ಷೆ ಶೀಲಾವತಿ ಮಾಧವ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ಕುಮಾರ್ ಮೇನಾಲ, ಪುತ್ತೂರು ತಾಲೂಕು ಅಧ್ಯಕ್ಷ ಪದ್ಮನಾಭ ಶೆಟ್ಟಿ, ಕೊಡಗು ಜನಜಾಗೃತಿ ವೇದಿಕೆಯ ಅಧ್ಯಕ್ಷ ಅರುಣ್ ಬಾನಂಗಡ, ತಾಲೂಕು ಒಕ್ಕೂಟದ ಅಧ್ಯಕ್ಷ ಜನಾರ್ಧನ, ಬೂಡು ರಾಧಾಕೃಷ್ಣ ರೈ ಮುಖ್ಯ ಅತಿಥಿಗಳಾಗಿದ್ದರು.

ಎರಡು ದಿನಗಳ ಕಾಲ ನಡೆದ ಮಹಿಳಾ ಸಮ್ಮಿಲನದಲ್ಲಿ ವಿವಿಧ ಗೋಷ್ಠಿಗಳು ಚಿಂತನ ಮಂಥನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು

 

See also  ದೇಶದ ಗೌರವ ಹೆಚ್ಚಿಸುವ ಕಾರ್ಯಕ್ಕೆ ಯುವ ಜನತೆ ಮುಂದಾಗಬೇಕು: ಚಕ್ರವರ್ತಿ ಸೂಲಿಬೆಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

180
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು