News Kannada
Tuesday, September 27 2022

ಕರಾವಳಿ

ಕಕ್ಕಿಂಜೆ ಅರಣ್ಯ ಪ್ರದೇಶಕ್ಕೆ ಬೆಂಕಿ - 1 min read

Photo Credit :

ಕಕ್ಕಿಂಜೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಬೆಳ್ತಂಗಡಿ: ಬೆಳ್ತಂಗಡಿ ಅರಣ್ಯ ವಲಯದ ಕಕ್ಕಿಂಜೆ ಸಮೀಪದ ಚಿಬಿದ್ರೆಯ ಅರಣ್ಯ ಇಲಾಖೆಗೆ ಸಂಬಂಧಿಸಿದ ಅರಣ್ಯ ಪ್ರದೇಶಕ್ಕೆ ಮಂಗಳವಾರ ಮಧ್ಯಾಹ್ನ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ.

ಇಲ್ಲಿನ ಅರಣ್ಯದ ಮಧ್ಯೆ ಹೈವೋಲ್ಟೇಜ್ ವಿದ್ಯುತ್ ತಂತಿಗಳು ಹಾದುಹೋಗುತ್ತಿದ್ದು ಇದರಿಂದ ಬಿದ್ದ ಕಿಡಿಯಿಂದ ಬೆಂಕಿ ಹತ್ತಿಕೊಂಡಿರಬಹುದುದೆಂದು ಹೇಳಲಾಗುತ್ತಿದೆ. ವಿದ್ಯುತ್ ತಂತಿಗಳು ಹಾದು ಹೋಗುವ ಸ್ಥಳಗಳಲ್ಲಿ ಮುಂಜಾಗ್ರತೆಗಾಗಿ ಸಂಬಂಧಪಟ್ಟವರಿಗೆ ಹಲವಾರು ಬಾರಿ ಅರಣ್ಯ ಇಲಾಖೆಯಿಂದ ತಿಳಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬೇಸಿಗೆ ಕಾಲ ಆಗಿದ್ದರಿಂದ ಉರಿ ಬಿಸಿಲಿನ ಬೇಗೆಗೆ ವಿದ್ಯುತ್ ತಂತಿಗಳಿಂದ ಕಿಡಿ ಬಿದ್ದು ಒಣ ಹುಲ್ಲುಗಳಿಗೆ ಬೆಂಕಿ ಹಚ್ಚಿಕೊಂಡಿರಬಹುದು. ಇದರಿಂದ ಸುಮಾರು 2 ಎಕರೆ ಅರಣ್ಯಕ್ಕೆ ಬೆಂಕಿ ಹಬ್ಬಿತ್ತು. ಇನ್ನಾದರೂ ಸಂಬಂಧಪಟ್ಟವರು ಮುಂಜಾಗ್ರಾತಾ ಕ್ರಮ ಕೈಗೊಳ್ಳವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

ಮಧ್ಯಾಹ್ನ ಬೆಂಕಿ ಬಿದ್ದಿದ್ದು ಸಂಜೆಯವರೆಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಊರವರು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

See also  ತ್ಯಾಜ್ಯಗಳ ರಾಶಿಯಲ್ಲಿ ಕೊರಗುತಿರುವ ಕಲ್ಚರ್ಪೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು