News Kannada
Monday, September 26 2022

ಕರಾವಳಿ

ಕಂಬಳ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ: ವಿಜಯರಾಘವ ಪಡ್ವೆಟ್ನಾಯ - 1 min read

Photo Credit :

ಕಂಬಳ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ: ವಿಜಯರಾಘವ ಪಡ್ವೆಟ್ನಾಯ

ಬೆಳ್ತಂಗಡಿ: ಕರಾವಳಿ ಕ್ರೀಡೆಯಾದ ಕಂಬಳವು ಮನರಂಜನೆಯನ್ನು ನೀಡುವಂತಹ ಕ್ರೀಡೆಯಾಗಿದ್ದು, ಕರಾವಳಿ ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ನಡೆಯುತ್ತಾ ಬಂದಿರುವ ಕ್ರೀಡೆಯಾಗಿದೆ. ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮಲ್ಲಿರಬೇಕು ಎಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಹೇಳಿದ್ದಾರೆ.

ಅವರು ಶನಿವಾರ 21ನೇ ವರ್ಷದ ಹೊನಲು ಬೆಳಕಿನ ಬಂಗಾಡಿ-ಕೊಲ್ಲಿ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟಿಸಿ ಮಾತನಾಡಿದರು.

ಧ.ಗ್ರಾ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್ ಮಾತನಾಡಿ, ಕಂಬಳವು ಜನಪದ ಕ್ರೀಡೆಯಾದರೂ ಇತ್ತೀಚಿನ ದಿನಗಳಲ್ಲಿ ಕೆಲವು ಹಿಂಸೆ ನಡೆಯುತ್ತದೆ ಎಂದು ಮುಂದಿಟ್ಟು ಕಂಬಳ ರದ್ದತಿಗೆ ಪ್ರಯತ್ನಿಸುತ್ತಿದ್ದಾರೆ. ಆದರೆ ನ್ಯಾಯಾಲಯವು ಇದಕ್ಕೆ ಮನ್ನಣೆ ನೀಡದೆ ಕರಾವಳಿ ಜನರಿಗೆ ನ್ಯಾಯ ಒದಗಿಸಿದೆ. ಮುಂದಿನ ದಿನಗಳಲ್ಲಿ ಕಂಬಳದಲ್ಲಿ ಬಹಳ ಎಚ್ಚರಿಕೆಯನ್ನು ವಹಿಸಿ ಮತ್ತೆ ಕಂಬಳಕ್ಕೆ ಅನ್ಯಾಯವಾಗದಂತೆ ನೋಡಿಕೊಂಡು ಜನಪದ ಕ್ರೀಡೆಯನ್ನು ಬೆಳೆಸುವಂತಹ ಮನೋಭಾವ ನಮ್ಮಲ್ಲಿ ಬರಬೇಕು ಎಂದರು.

ಕಂಬಳ ಸಮಿತಿಯ ಗೌರವಾಧ್ಯಕ್ಷ ರಂಜನ್ ಜಿ. ಗೌಡ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ನಿವೃತ್ತ ಎಸ್.ಪಿ ಪಿತಾಂಬರ ಹೆರಾಜೆ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ. ಸದಸ್ಯರಾದ ಮಮತಾ ಶೆಟ್ಟಿ, ಸೌಮ್ಯಲತಾ ಜಯಂತ್ ಗೌಡ, ಧ.ಗ್ರಾ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ಮೇಲ್ವಿಚಾರಕಿ ಅಶ್ವಿತಾ, ಉದ್ಯಮಿ ಬದ್ರುದ್ದೀನ್ ಹೆಚ್., ಕಂಬಳ ಸಮಿತಿ ಉಪಾಧ್ಯಕ್ಷ ತುಂಗಪ್ಪ ಪೂಜಾರಿ, ಸೀತಾರಾಮ ಹಾರ್ತಕಜೆ, ಕಾರ್ಯದರ್ಶಿ ಕಿಶೋರ್ ವಳಂಬ್ರ, ಜತೆ ಕಾರ್ಯದರ್ಶಿ ಕಿಶೋರ್ ಹೂರ್ಜೆ, ವಿನಯಚಂದ್ರ, ಸ್ವಾಗತ ಸಮಿತಿ ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳೆಂಜ, ಪತ್ರಕರ್ತರಾದ ಅಶ್ರಫ್ ಆಲಿಕುಂಞಿ, ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಅಧ್ಯಕ್ಷ ಡಾ. ಎಂ.ಎಂ ದಯಾಕರ್ ಸ್ವಾಗತಿಸಿ, ಕೋಶಾಧಿಕಾರಿ ಭರತ್ ಕುಮಾರ್ ಬಂಗಾಡಿ ವಂದಿಸಿದರು. ಉಮೇಶ್ ಕಾರ್ಯಕ್ರಮ ನಿರೂಪಿಸಿದರು.

See also  ಅರಬ್ಬೀ ಸಮುದ್ರದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದಾದ ನೌಕಾ ಸೇನಾ ಹೆಲಿಕಾಪ್ಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು